ಆದಿಕಾಂಡ 5:29 - ಪರಿಶುದ್ದ ಬೈಬಲ್29 ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯೆಹೋವನು ಶಪಿಸಿದ ಭೂವಿುಯಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಶ್ರಮೆಯಲ್ಲಿಯೂ ಈ ಮಗನು ನಮ್ಮನ್ನು ಉಪಶಮನಗೊಳಿಸುವನು ಎಂದು ಹೇಳಿ ಅವನಿಗೆ ನೋಹ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವನಿಗೆ, ನೋಹ ಎಂದು ಹೆಸರಿಟ್ಟು, “ಯೆಹೋವ ದೇವರು ಶಪಿಸಿದ ಭೂಮಿಯಿಂದ ನಮಗೆ ಉಂಟಾದ ಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಉಪಶಮನಗೊಳಿಸುವನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”