Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:10 - ಪರಿಶುದ್ದ ಬೈಬಲ್‌

10 ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:10
16 ತಿಳಿವುಗಳ ಹೋಲಿಕೆ  

ಬಳಿಕ ಆ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.


ದಾವೀದನು, ಸೌಲನನ್ನು ಮತ್ತು ಅವನ ಮಗನಾದ ಯೋನಾತಾನನನ್ನು ಕುರಿತು ಒಂದು ಶೋಕಗೀತೆಯನ್ನು ಹಾಡಿದನು.


ನಂತರ ಈ ಜನರು ಸೌಲ ಮತ್ತು ಅವನ ಮೂರು ಮಕ್ಕಳ ಮೂಳೆಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನ ಪಿಚುಲ ಮರದ ಕೆಳಗೆ ಸಮಾಧಿಮಾಡಿದರು. ನಂತರ ಯಾಬೇಷಿನ ಜನರು ದುಃಖದಿಂದ ಏಳು ದಿನಗಳ ಕಾಲ ಉಪವಾಸ ಮಾಡಿದರು.


ಇಸ್ರೇಲರು ಮೋಶೆಗಾಗಿ ಮೂವತ್ತು ದಿವಸಗಳ ತನಕ ಗೋಳಾಡಿದರು. ಶೋಕದ ದಿವಸಗಳು ಕಳೆಯುವ ತನಕ ಅವರು ಮೋವಾಬಿನಲ್ಲಿದ್ದ ಜೋರ್ಡನ್ ಕಣಿವೆಯಲ್ಲಿ ತಂಗಿದ್ದರು.


ಇಸ್ರೇಲರಿಗೆ ಮೋಶೆಯು ಈ ಆಜ್ಞೆಗಳನ್ನು ಕೊಟ್ಟನು. ಆಗ ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ಅಡವಿಯಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇದು ಸೂಫಿಗೆ ಎದುರಾಗಿ, ಪಾರಾನಿನ ಮರುಭೂಮಿಗೂ ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಪಟ್ಟಣಗಳ ನಡುವೆ ಇತ್ತು.


ಯಾವನಾದರೂ ಮನುಷ್ಯನ ಶವವನ್ನು ಮುಟ್ಟಿದರೆ, ಏಳು ದಿನಗಳವರೆಗೆ ಅಶುದ್ಧನಾಗಿರುವನು.


ಕಾನಾನಿನ ಜನರು ಗೋರೆನ್‌ಅಟಾದ್‌ನಲ್ಲಿ ಶೋಕಿಸುತ್ತಿರುವವರನ್ನು ನೋಡಿ, “ಈಜಿಪ್ಟಿನವರು ಬಹಳ ದುಃಖಕರವಾದ ಅಂತ್ಯಕ್ರಿಯೆ ಮಾಡುತ್ತಿದ್ದಾರೆ” ಎಂದು ಹೇಳಿದರು. ಆದ್ದರಿಂದ ಆ ಸ್ಥಳಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು.


ಎಪ್ಪತ್ತು ದಿನಗಳಾದ ಮೇಲೆ ಯೋಸೇಫನು ಫರೋಹನ ಅಧಿಕಾರಿಗಳಿಗೆ, “ದಯವಿಟ್ಟು ಇದನ್ನು ಫರೋಹನಿಗೆ ತಿಳಿಸಿರಿ.


ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.


ಈಜಿಪ್ಟಿನವರು ಆ ಶರೀರವನ್ನು ವಿಶೇಷವಾದ ರೀತಿಯಲ್ಲಿ ನಲವತ್ತು ದಿನಗಳವರೆಗೆ ಸಿದ್ಧಪಡಿಸಿದರು. ಬಳಿಕ ಈಜಿಪ್ಟಿನವರು ಯಾಕೋಬನಿಗಾಗಿ ಎಪ್ಪತ್ತು ದಿನಗಳವರೆಗೆ ಗೋಳಾಡಿದರು.


ಗಂಡಸರು ಯೋಸೇಫನೊಂದಿಗೆ ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಹೋದರು. ಅದು ಬಹಳ ದೊಡ್ಡ ಗುಂಪಾಗಿತ್ತು.


ಆರೋನನು ಸತ್ತನೆಂದು ಇಸ್ರೇಲರೆಲ್ಲರಿಗೆ ತಿಳಿಯಿತು. ಆದ್ದರಿಂದ ಇಸ್ರೇಲಿನಲ್ಲಿ ಪ್ರತಿಯೊಬ್ಬನೂ ಆರೋನನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದನು.


ತನ್ನ ಗಂಡನಾದ ಊರೀಯನು ಸತ್ತನೆಂಬ ಸುದ್ದಿಯು ಬತ್ಷೆಬೆಳಿಗೆ ತಿಳಿಯಿತು. ಆಗ ಅವಳು ತನ್ನ ಗಂಡನಿಗಾಗಿ ಗೋಳಾಡಿದಳು.


ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.


ಆಗ ಯಾಬೇಷ್ ಗಿಲ್ಯಾದಿನ ರಣವೀರರು ಹೊರಟು ಸೌಲನ ಮತ್ತು ಅವನ ಗಂಡುಮಕ್ಕಳ ಶವಗಳನ್ನು ಯಾಬೇಷ್ ಗಿಲ್ಯಾದಿಗೆ ತಂದರು. ಆ ರಣವೀರರು ಸೌಲನ ಮತ್ತು ಅವನ ಗಂಡುಮಕ್ಕಳ ಎಲುಬುಗಳನ್ನು ಯಾಬೇಷಿನಲ್ಲಿದ್ದ ಒಂದು ದೊಡ್ಡ ಮರದ ಬುಡದಲ್ಲಿ ಹೂಳಿಟ್ಟರು. ಅನಂತರ ಏಳು ದಿವಸಗಳ ತನಕ ಅವರು ಶೋಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು