ಆದಿಕಾಂಡ 50:17 - ಪರಿಶುದ್ದ ಬೈಬಲ್17 ನೀವು ಯೋಸೇಫನಿಗೆ, ಈ ಸಂದೇಶವನ್ನು ಕೊಡಬೇಕು, ‘ನಾವು ಮಾಡಿದ್ದು ಕೆಟ್ಟಕಾರ್ಯವೇ ನಿಜ. ಅದಕ್ಕಾಗಿ ನೀನು ಅವರನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.’ ಆದ್ದರಿಂದ ನಾವು ಮಾಡಿದ ಕೆಟ್ಟಕಾರ್ಯಕ್ಕಾಗಿ ನೀನು ನಮ್ಮನ್ನು ಕ್ಷಮಿಸಬೇಕು. ನಾವು ನಿನ್ನ ತಂದೆಯ ದೇವರಿಗೆ ಸೇವಕರಾಗಿದ್ದೇವೆ” ಎಂದು ಹೇಳಿದರು. ಈ ವಿಷಯಗಳನ್ನು ಕೇಳಿ ಅವನು ದುಃಖದಿಂದ ಅತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ‘ನೀವು ಜೋಸೆಫನಿಗೆ - ನಿನ್ನ ಅಣ್ಣಂದಿರಾದ ನಾವು ನಿನಗೆ ಹಾನಿಮಾಡಿದ್ದೇನೋ ನಿಜ; ಆದರೂ ನಮ್ಮ ಅಪರಾಧವನ್ನು, ಪಾಪವನ್ನು ಕ್ಷಮಿಸು - ಎಂದು ಕೇಳಿಕೊಳ್ಳಬೇಕು, ಅವರು ಹೀಗೆ ವಿಧಿಸಿದ್ದರಿಂದ ನಾವು ಮಾಡಿದ ಅಪರಾಧವನ್ನು ಈಗ ನೀನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತಿದ್ದೇವೆ.” ಈ ಮಾತುಗಳನ್ನು ಕೇಳಿ ಜೋಸೆಫನು ಕಣ್ಣೀರು ಸುರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ; ಆದರೂ ನಮ್ಮ ಅಪರಾಧವನ್ನೂ ಪಾಪವನ್ನೂ ಕ್ಷವಿುಸು ಎಂಬದಾಗಿ ಹೇಳಿಕೊಳ್ಳಬೇಕು; ಹೀಗೆ ಅವನು ಅಪ್ಪಣೆಮಾಡಿದ್ದರಿಂದ ನೀನು ಈಗ ನಿನ್ನ ತಂದೆಯ ದೇವರಿಗೆ ಭಕ್ತರಾಗಿರುವ ನಾವು ಮಾಡಿದ ಅಪರಾಧವನ್ನು ಕ್ಷವಿುಸಬೇಕೆಂದು ಬೇಡಿಕೊಳ್ಳುತ್ತೇವೆಂದು ಹೇಳಿಕಳುಹಿಸಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು. ಅಧ್ಯಾಯವನ್ನು ನೋಡಿ |