ಆದಿಕಾಂಡ 50:19 - ಪರಿಶುದ್ದ ಬೈಬಲ್19 ಆಗ ಯೋಸೇಫನು ಅವರಿಗೆ, “ಭಯಪಡಬೇಡಿ. ನಾನು ದೇವರಲ್ಲ; ನಿಮ್ಮನ್ನು ಶಿಕ್ಷಿಸಲು ನನಗೆ ಅಧಿಕಾರವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ ಜೋಸೆಪನು ಅವರಿಗೆ, “ಹೆದರಬೇಡಿ; ನಾನು ದೇವರ ಸ್ಥಾನದಲ್ಲಿ ಇಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೋಸೇಫನು ಅವರಿಗೆ - ಹೆದರಬೇಡಿರಿ; ನಾನೇನು ದೇವರ ಪ್ರತಿನಿಧಿಯೇ? ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದ್ದಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೋಸೇಫನು ಅವರಿಗೆ, “ಭಯಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ? ಅಧ್ಯಾಯವನ್ನು ನೋಡಿ |
ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.