Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:2 - ಪರಿಶುದ್ದ ಬೈಬಲ್‌

2 ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಾದ ವೈದ್ಯರಿಗೆ ಹೇಳಿದನು. ಆ ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತರುವಾಯ ತನ್ನ ಸೇವಕರಲ್ಲಿ ಶವಲೇಪಕರಾದವರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ಲೇಪಿಸಿ ಸಿದ್ಧಪಡಿಸಿರಿ,” ಎಂದು ಅಪ್ಪಣೆಕೊಟ್ಟನು. ಅವರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತರುವಾಯ ಅವನು ತನ್ನ ಸೇವಕರಾದ ವೈದ್ಯರಿಗೆ - ನನ್ನ ತಂದೆಯ ಶವವನ್ನು ಸುಗಂಧದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ ಎಂದು ಅಪ್ಪಣೆಕೊಡಲು ಅವರು ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೋಸೇಫನು ತನ್ನ ತಂದೆ ಇಸ್ರಾಯೇಲನಿಗೆ ಸುಗಂಧದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:2
10 ತಿಳಿವುಗಳ ಹೋಲಿಕೆ  

ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳಧೂಪವನ್ನು ಸುಟ್ಟರು.


ಯೋಸೇಫನು ತನ್ನ ನೂರಹತ್ತನೆ ವರ್ಷದಲ್ಲಿ ತೀರಿಕೊಂಡನು. ಈಜಿಪ್ಟಿನಲ್ಲಿ ವೈದ್ಯರು ಅವನ ಶರೀರವನ್ನು ಸಮಾಧಿಗೆ ಸಿದ್ಧಪಡಿಸಿ ಶವಪೆಟ್ಟಿಗೆಯಲ್ಲಿಟ್ಟರು.


ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು.


ನಾನು ಸತ್ತನಂತರ ನನ್ನನ್ನು ಸಮಾಧಿಗೆ ಸಿದ್ಧಪಡಿಸುವುದಕ್ಕಾಗಿ ಈ ಸ್ತ್ರೀಯು ನನ್ನ ದೇಹದ ಮೇಲೆ ಸುಗಂಧತೈಲವನ್ನು ಸುರಿದಳು.


ಯೇಸು ಅವನಿಗೆ, “ಆಕೆಯನ್ನು ತಡೆಯಬೇಡ. ನನ್ನನ್ನು ಶವಸಂಸ್ಕಾರಕ್ಕೆ ಸಿದ್ಧಪಡಿಸುವ ಈ ದಿನಕ್ಕೋಸ್ಕರ ಆಕೆ ಸುಗಂಧ ದ್ರವ್ಯವನ್ನು ಶೇಖರಿಸಿದ್ದು ಒಳ್ಳೆಯದೇ ಸರಿ.


ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.


ಈಕೆ ನನಗಾಗಿ ತನ್ನಿಂದ ಸಾಧ್ಯವಾದ ಒಂದು ಕಾರ್ಯವನ್ನು ಮಾಡಿದಳು. ನಾನು ಸಾಯುವುದಕ್ಕಿಂತ ಮುಂಚೆ ನನ್ನನ್ನು ಸಮಾಧಿಗೆ ಸಿದ್ಧಮಾಡಲು ಆಕೆ ನನ್ನ ದೇಹದ ಮೇಲೆ ಪರಿಮಳತೈಲ ಸುರಿದಳು.


ಅಂದಿನಿಂದ ಏಸಾವನು ಯಾಕೋಬನನ್ನು ದ್ವೇಷಿಸಿದನು. ಏಸಾವನು ತನ್ನೊಳಗೆ, “ನನ್ನ ತಂದೆ ಬಹುಬೇಗನೆ ಸತ್ತುಹೋಗುವನು. ಆಗ ನಾನು ಅವನಿಗಾಗಿ ದುಃಖಿಸಿ ಆ ಬಳಿಕ ಯಾಕೋಬನನ್ನು ಕೊಲ್ಲುವೆನು” ಅಂದುಕೊಂಡನು.


ಇಸ್ರೇಲನು ಸತ್ತಾಗ ಯೋಸೇಫನು ತುಂಬ ದುಃಖಿಸಿದನು. ಅವನು ತನ್ನ ತಂದೆಯನ್ನು ಅಪ್ಪಿಕೊಂಡು ಗೋಳಾಡಿ ಮುದ್ದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು