ಆದಿಕಾಂಡ 50:21 - ಪರಿಶುದ್ದ ಬೈಬಲ್21 ಆದ್ದರಿಂದ ಭಯಪಡದಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಪೋಷಿಸುತ್ತೇನೆ” ಎಂದು ಹೇಳಿದನು. ಯೋಸೇಫನು ತನ್ನ ಸಹೋದರರೊಂದಿಗೆ ಸೌಮ್ಯವಾಗಿ ಮಾತನಾಡಿದ್ದರಿಂದ ಅವರಿಗೆ ತುಂಬ ಸಂತೋಷವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ; ನಾನು ನಿಮ್ಮನ್ನೂ ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗಿರುವುದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ,” ಎಂದು ಹೇಳಿ, ಅವರನ್ನು ಸಂತೈಸಿ, ದಯೆಯಿಂದ ಮಾತನಾಡಿದನು. ಅಧ್ಯಾಯವನ್ನು ನೋಡಿ |
ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದುಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಆ ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಆ ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು.