ಆದಿಕಾಂಡ 6:11 - ಪರಿಶುದ್ದ ಬೈಬಲ್11-12 ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಭೂಲೋಕದವರು ದೇವರ ದೃಷ್ಟಿಗೆ ಕೆಟ್ಟುಹೋಗಿದ್ದರು; ಅನ್ಯಾಯವು ಲೋಕವನ್ನು ತುಂಬಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು. ಅಧ್ಯಾಯವನ್ನು ನೋಡಿ |
ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ.