Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:13 - ಪರಿಶುದ್ದ ಬೈಬಲ್‌

13 ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ದೇವರು ನೋಹನಿಗೆ - ಎಲ್ಲಾ ದೇಹಿಗಳಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅವರ ಅನ್ಯಾಯದಿಂದ ತುಂಬಿ ಅದೆ; ನಾನು ಅವರನ್ನೂ ಭೂವಿುಯ ಮೇಲಿರುವದೆಲ್ಲವನ್ನೂ ಅಳಿಸಿಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:13
19 ತಿಳಿವುಗಳ ಹೋಲಿಕೆ  

ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.


ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.


ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.


ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. ಆದರೆ ಒಂದು ಜನಾಂಗವಾಗಿ ನೀನು ಬಹಳ ಕಾಲ ಮುಂದುವರೆಯಲಾರೆ. ನಿನ್ನ ವಿನಾಶ ಕಾಲ ಸಮೀಪಿಸಿದೆ.


“ಸಿಮೆಯೋನನೂ ಲೇವಿಯೂ ಸಹೋದರರಾಗಿದ್ದಾರೆ. ಅವರು ತಮ್ಮ ಖಡ್ಗಗಳಿಂದ ಹೋರಾಡಲು ಇಷ್ಟಪಡುವರು.


ನಿನಗೋಸ್ಕರ ಒಂದು ನಾವೆಯನ್ನು ತುರಾಯಿ ಮರದಿಂದ ತಯಾರಿಸು. ಆ ನಾವೆಯಲ್ಲಿ ಕೋಣೆಗಳನ್ನು ಮಾಡು. ಇಡೀ ನಾವೆಗೆ ಒಳಭಾಗದಲ್ಲೂ ಹೊರಭಾಗದಲ್ಲೂ ರಾಳವನ್ನು ಹಚ್ಚು.


ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು.


ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯು ಸತ್ತುಹೋಯಿತು. ಎಲ್ಲಾ ಪುರುಷರು ಮತ್ತು ಸ್ತ್ರೀಯರು ಸತ್ತುಹೋದರು. ಎಲ್ಲಾ ಪಕ್ಷಿಗಳು, ಪಶುಗಳು, ಪ್ರಾಣಿಗಳು ಮತ್ತು ಪ್ರತಿಯೊಂದು ಬಗೆಯ ಕ್ರಿಮಿಗಳು ಸತ್ತುಹೋದವು.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ಎಲ್ಲಾ ಜನಾಂಗಗಳೇ, ಹತ್ತಿರ ಬಂದು ಕೇಳಿರಿ; ಜನಗಳೇ ಸ್ಪಷ್ಟವಾಗಿ ಕೇಳಿಸಿಕೊಳ್ಳಿರಿ. ಭೂಮಿಯೂ ಭೂಮಿಯ ಮೇಲಿರುವ ಸಮಸ್ತವೂ ಅವುಗಳಿಗೆ ಕಿವಿಗೊಡಬೇಕು. ಲೋಕವೂ ಅದರಲ್ಲಿರುವ ಸಮಸ್ತವೂ ಆಲಿಸಲಿ.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು