ಆದಿಕಾಂಡ 6:15 - ಪರಿಶುದ್ದ ಬೈಬಲ್15 “ನೀನು ತಯಾರಿಸುವ ನಾವೆಯು ನಾನೂರೈವತ್ತು ಅಡಿ ಉದ್ದವಾಗಿಯೂ ಎಪ್ಪತ್ತೈದು ಅಡಿ ಅಗಲವಾಗಿಯೂ ನಲವತ್ತೈದು ಅಡಿ ಎತ್ತರವಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದನ್ನು ಹೀಗೆ ಮಾಡು: ಅದರ ಉದ್ದ ಮುನ್ನೂರು ಮೊಳ, ಅಗಲ ಐವತ್ತು ಮೊಳ, ಎತ್ತರ ಮೂವತ್ತು ಮೊಳ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀನು ಅದನ್ನು ಮಾಡಬೇಕಾದ ವಿಧಾನ ಹೇಗಂದರೆ - ಅದು ಮುನ್ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನು ಅದನ್ನು ಈ ರೀತಿಯಾಗಿ ಮಾಡತಕ್ಕದ್ದು: ನಾವೆಯ ಉದ್ದವು ಸುಮಾರು ಒಂದುನೂರ ಮೂವತ್ತೈದು ಮೀಟರ್, ಅದರ ಅಗಲ ಇಪ್ಪತ್ತಮೂರು ಮೀಟರ್, ಅದರ ಎತ್ತರ ಹದಿನಾಲ್ಕು ಮೀಟರ್ ಇರಬೇಕು. ಅಧ್ಯಾಯವನ್ನು ನೋಡಿ |