Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:9 - ಪರಿಶುದ್ದ ಬೈಬಲ್‌

9 ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೋಹನ ಚರಿತ್ರೆಯು - ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ತಪ್ಪಿಲ್ಲದವನೂ ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:9
34 ತಿಳಿವುಗಳ ಹೋಲಿಕೆ  

ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.


ಬಹಳ ಹಿಂದೆ ಬದುಕಿದ್ದ ಕೆಟ್ಟ ಜನರನ್ನು ದೇವರು ದಂಡಿಸಿದನು. ಈ ಲೋಕದಲ್ಲಿ ತನಗೆ ವಿರುದ್ಧವಾದ ಜನರು ತುಂಬಿಕೊಂಡಿದ್ದಾಗ ಆತನು ಜಲಪ್ರಳಯವನ್ನು ಬರಮಾಡಿ ದನು. ಆದರೆ ನೋಹನನ್ನೂ ಅವನೊಂದಿಗಿದ್ದ ಏಳು ಮಂದಿಯನ್ನೂ ರಕ್ಷಿಸಿದನು. ಯೋಗ್ಯರಾಗಿ ಜೀವಿಸಬೇಕೆಂದು ಆ ಜನರಿಗೆ ತಿಳಿಸಿದವನೇ ನೋಹ.


ಆಮೇಲೆ ಯೆಹೋವನು ನೋಹನಿಗೆ, “ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು.


ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.


ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.”


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.


ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.


ಇದು ಆಕಾಶದ ಮತ್ತು ಭೂಮಿಯ ಚರಿತ್ರೆ. ದೇವರು ಭೂಮಿಯನ್ನು ಮತ್ತು ಆಕಾಶವನ್ನು ಸೃಷ್ಟಿಸಿದಾಗ ನಡೆದ ಸಂಗತಿಗಳೇ ಈ ಚರಿತ್ರೆ.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.


ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.


ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”


ಅರಿಮಥಾಯ ಎಂಬುದು ಯೆಹೂದ್ಯರ ಒಂದು ಊರು. ಯೋಸೇಫನು ಇದರ ನಿವಾಸಿ. ಇವನು ಒಳ್ಳೆಯ ಧಾರ್ಮಿಕ ವ್ಯಕ್ತಿಯಾಗಿದ್ದನು. ದೇವರ ರಾಜ್ಯದ ಆಗಮನವನ್ನು ಇವನು ನಿರೀಕ್ಷಿಸಿದ್ದನು. ಯೋಸೇಫನು ಯೆಹೂದ್ಯರ ಹಿರಿಸಭೆಯ ಸದಸ್ಯನಾಗಿದ್ದನು. ಆದರೆ ಬೇರೆ ಯೆಹೂದ್ಯ ನಾಯಕರು ಯೇಸುವನ್ನು ಕೊಲ್ಲಲು ತೀರ್ಮಾನಿಸಿದಾಗ ಇವನು ಅದಕ್ಕೆ ಒಪ್ಪಲಿಲ್ಲ.


ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.


ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಈ ಸಂದೇಶವನ್ನು ನಂಬುವನು. ಆ ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.”


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


ಆದರೂ ಯೆಹೂದದ ಎಲ್ಲಾ ಉನ್ನತಸ್ಥಳಗಳು ತೆಗೆಯಲ್ಪಡಲಿಲ್ಲ, ಆದರೆ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ನಂಬಿಗಸ್ತನಾಗಿದ್ದನು.


ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಹೀಗೆಂದನು: “ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು. ಆ ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು.


“ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು. ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ.


ಸೊಲೊಮೋನನು, “ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಬಹಳ ದಯಾಪರನಾಗಿದ್ದೆ. ಅವನು ನಿನ್ನನ್ನು ಅನುಸರಿಸಿದನು. ಅವನು ಒಳ್ಳೆಯವನಾಗಿದ್ದು ನೀತಿವಂತನಾಗಿ ಬದುಕಿದನು. ಅವನ ನಂತರ ಅವನ ಮಗನನ್ನು ಅವನ ಸಿಂಹಾಸನದಲ್ಲಿ ಕುಳ್ಳಿರಿಸಿ ಆಳಲು ನೇಮಿಸಿ ನೀನು ಮಹಾಕೃಪೆಯನ್ನು ತೋರಿಸಿದೆ.


ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ಅಮಚ್ಯನು ಮಾಡಿದರೂ ಹೃದಯ ಪೂರ್ವಕವಾಗಿ ಮಾಡಲಿಲ್ಲ.


ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಈ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು:


ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು.


ಅವನಿಗೆ ಮೂವರು ಗಂಡುಮಕ್ಕಳಿದ್ದರು: ಶೇಮ್, ಹಾಮ್, ಯೆಫೆತ್.


ನಿಮ್ಮ ದೇವರಾದ ಯೆಹೋವನಿಗೆ ನೀವು ನಂಬಿಗಸ್ತರಾಗಿರಬೇಕು.


ನಾನು ದೋಷಿಯಲ್ಲವೆಂಬುದು ಆತನಿಗೆ ತಿಳಿದಿದೆ. ನಾನು ಪಾಪದಲ್ಲಿ ಬೀಳದಂತೆ ಎಚ್ಚರಿಕೆ ವಹಿಸಿದೆನು.


ಯೆಹೋವನು ನೀತಿವಂತರನ್ನು ಕಾಪಾಡುತ್ತಾನೆ. ಅವರು ಆಪತ್ತಿನಲ್ಲಿರುವಾಗ ಆತನೇ ಅವರಿಗೆ ಆಶ್ರಯಸ್ಥಾನವಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು