ಆದಿಕಾಂಡ 7:11 - ಪರಿಶುದ್ದ ಬೈಬಲ್11-13 ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೋಹನ ಜೀವಮಾನದ ಆರುನೂರನೆಯ ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನ ಭೂಮಿಯ ಅಡಿಸಾಗರದ ಸೆಲೆಗಳು ಒಡೆದವು. ಆಕಾಶದ ತೂಬುಗಳು ತೆರೆದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂವಿುಯ ಕೆಳಗಿರುವ ಸಾಗರದ ಸೆಲೆಗಳು ಒಡೆದವು; ಆಕಾಶದ ತೂಬುಗಳು ತೆರೆದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.