Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:16 - ಪರಿಶುದ್ದ ಬೈಬಲ್‌

16 ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವರು ನೋಹನಿಗೆ ಅಪ್ಪಣೆಕೊಟ್ಟ ಮೇರೆಗೆ, ಗಂಡು ಹೆಣ್ಣಂತೆ ಎಲ್ಲ ಪ್ರಾಣಿಗಳು ಬಂದು ಸೇರಿದವು. ಬಳಿಕ ಸರ್ವೇಶ್ವರ, ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗಿಟ್ಟು ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ನೋಹನಿಗೆ ಆಜ್ಞಾಪಿಸಿದಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು, ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವ ದೇವರು ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:16
15 ತಿಳಿವುಗಳ ಹೋಲಿಕೆ  

ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.


“ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.


ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.


ಆಗ ನೀನು ಎಡವಿಬೀಳದೆ ಸುರಕ್ಷಿತವಾಗಿ ನಡೆಯುವೆ.


ಉಸಿರಾಡುವ ಪ್ರತಿಯೊಂದು ಬಗೆಯ ಪ್ರಾಣಿಗಳು ತಮ್ಮತಮ್ಮ ಜಾತಿಗನುಸಾರವಾಗಿ ಎರಡೆರಡಾಗಿ ಬಂದವು.


ಭೂಮಿಯ ಮೇಲೆ ಜಲಪ್ರಳಯವು ನಲವತ್ತು ದಿನಗಳವರೆಗೆ ಇತ್ತು. ನೀರು ಮೇಲೇರುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲತೊಡಗಿತು.


ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು.


ನೋಹನೊಂದಿಗೆ ನಾವೆಯೊಳಗೆ ಹೋದವು. ದೇವರ ಆಜ್ಞೆಯಂತೆ ಈ ಪ್ರಾಣಿಗಳು ಜೋಡಿಜೋಡಿಯಾಗಿ ನಾವೆಯೊಳಗೆ ಹೋದವು.


ದೇವರು ಕೆಡವಿದ್ದನ್ನು ಮತ್ತೆ ಕಟ್ಟುವುದಕ್ಕಾಗಲಿ ಸೆರೆಗೆ ಹಾಕಿದವನನ್ನು ಬಿಡಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು