Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:17 - ಪರಿಶುದ್ದ ಬೈಬಲ್‌

17 ಭೂಮಿಯ ಮೇಲೆ ಜಲಪ್ರಳಯವು ನಲವತ್ತು ದಿನಗಳವರೆಗೆ ಇತ್ತು. ನೀರು ಮೇಲೇರುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜಲಪ್ರಳಯಡ ಮಳೆ ನಲವತ್ತು ದಿನ ಭೂಮಿಯ ಮೇಲೆ ಒಂದೇ ಸಮನೆ ಸುರಿಯಿತು. ನೀರು ಹೆಚ್ಚುತ್ತಾ ನಾವೆಯನ್ನು ಮೇಲೆತ್ತಲು ಅದು ನೀರಿನ ಮೇಲೆ ತೇಲತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಜಲಪ್ರಳಯವು ನಾಲ್ವತ್ತು ದಿನ ಭೂವಿುಯ ಮೇಲೆ ಇದ್ದು ನೀರು ಹೆಚ್ಚುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಲವತ್ತು ದಿನ ಭೂಮಿಯ ಮೇಲೆ ಪ್ರಳಯವು ಬಂದು, ನೀರು ಹೆಚ್ಚಿ ನಾವೆಯನ್ನು ಮೇಲಕ್ಕೆ ಎತ್ತಲು ಅದು ಭೂಮಿಯಿಂದ ತೇಲಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:17
5 ತಿಳಿವುಗಳ ಹೋಲಿಕೆ  

ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು.


ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು.


ನೀರು ಇನ್ನೂ ಮೇಲೇರತೊಡಗಿದ್ದರಿಂದ ನಾವೆಯೂ ಭೂಮಿಯಿಂದ ಬಹು ಮೇಲೆ ಚಲಿಸತೊಡಗಿತು.


ಯೆಹೋವನು ಆಕಾಶದ ಮೇಲೆ ತನಗಾಗಿ ಮೇಲುಪ್ಪರಿಗೆಗಳನ್ನು ಕಟ್ಟಿದನು. ಭೂಮಿಯ ಮೇಲೆ ಆಕಾಶವನ್ನು ಹರಡಿದನು. ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಮಳೆಗೆರೆಯುವಂತೆ ಮಾಡುವನು. ಆತನ ಹೆಸರು ಯೆಹೋವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು