Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:3 - ಪರಿಶುದ್ದ ಬೈಬಲ್‌

3 ಎಲ್ಲಾ ಬಗೆಯ ಪಕ್ಷಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಉಳಿದ ಜೀವಿಗಳೆಲ್ಲ ನಾಶವಾದಮೇಲೆ, ಇವು ತಮ್ಮ ಸಂತತಿಗಳನ್ನು ಮುಂದುವರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪಕ್ಷಿಗಳಲ್ಲಿಯೂ ಏಳೇಳು ಗಂಡು ಹೆಣ್ಣುಗಳನ್ನು ತೆಗೆದುಕೊಳ್ಳಬೇಕು. ಹೀಗೆ ಆಯಾ ಜಾತಿಯನ್ನು ಭೂಮಿಯ ಮೇಲೆ ಉಳಿಸಿ ಕಾಪಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪಕ್ಷಿಗಳಲ್ಲಿಯೂ ಏಳೇಳು ಗಂಡುಹೆಣ್ಣುಗಳನ್ನು ತೆಗೆದುಕೊ. ಹೀಗೆ ಆಯಾ ಜಾತಿಯನ್ನು ಭೂಮಿಯಲ್ಲಿ ಉಳಿಸಿ ಕಾಪಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪಕ್ಷಿಗಳಲ್ಲಿಯೂ ಏಳೇಳು ಗಂಡುಹೆಣ್ಣುಗಳನ್ನು ತೆಗೆದುಕೋ. ಹೀಗೆ ಆಯಾ ಜಾತಿಯನ್ನು ಭೂವಿುಯ ಮೇಲೆ ಉಳಿಸಿ ಕಾಪಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಕಾಶದ ಪಕ್ಷಿಗಳಲ್ಲಿ ಗಂಡು, ಹೆಣ್ಣು ಏಳೇಳರಂತೆ ತೆಗೆದುಕೊಂಡು, ಭೂಮಿಯ ಮೇಲೆಲ್ಲಾ ಅವುಗಳ ಸಂತತಿಯನ್ನು ಜೀವಂತವಾಗಿ ಉಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:3
6 ತಿಳಿವುಗಳ ಹೋಲಿಕೆ  

ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪಕ್ಷಿಗಳಲ್ಲಿ ಎರಡೆರಡೂ ಪ್ರತಿಯೊಂದು ಪ್ರಾಣಿಗಳಲ್ಲಿ ಎರಡೆರಡೂ ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಜಂತುಗಳಲ್ಲಿ ಎರಡೆರಡೂ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ನಿನ್ನೊಂದಿಗಿರಲಿ.


ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು) ತೆಗೆದುಕೊ.


ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು.


ಎಲ್ಲಾ ಶುದ್ಧಪ್ರಾಣಿಗಳು, ಭೂಮಿಯ ಮೇಲಿರುವ ಇತರ ಎಲ್ಲಾ ಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ


ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು