13 ಆದ್ದರಿಂದ ನೋಹನು ನಾವೆಯ ಬಾಗಿಲನ್ನು ತೆರೆದು ಸುತ್ತಲೂ ನೋಡಿದನು. ನೆಲವೆಲ್ಲಾ ಒಣಗಿತ್ತು. ಅಂದು ಮೊದಲನೆಯ ವರ್ಷದ ಮೊದಲನೆಯ ತಿಂಗಳ ಮೊದಲನೆಯ ದಿನವಾಗಿತ್ತು. ಆಗ ನೋಹನಿಗೆ ಆರುನೂರ ಒಂದು ವರ್ಷವಾಗಿತ್ತು.
13 ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
13 ನೋಹನ 601 ನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಸಣಿಗೆಯನ್ನು ತೆಗೆದು ನೋಡಿದನು. ಇಗೋ, ಭೂಮಿಯ ತೇವ ಆರುತ್ತಿತ್ತು.
13 ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂವಿುಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಸಣಿಗೆಯನ್ನು ತೆಗೆದು ನೋಡಲಾಗಿ, ಆಹಾ, ಭೂವಿುಯು ಆರಿಹೋಗಿತ್ತು.
ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.