ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.
ನಾನು ಸಹ ಬೇರೆ ಅಧಿಕಾರಿಗಳ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿ ಸಿಪಾಯಿಗಳಿದ್ದಾರೆ. ನಾನು ಒಬ್ಬ ಸಿಪಾಯಿಗೆ ‘ಹೋಗು’ ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬ ಸಿಪಾಯಿಗೆ ‘ಬಾ’ ಅಂದರೆ ಅವನು ಬರುತ್ತಾನೆ. ನಾನು ನನ್ನ ಸೇವಕನಿಗೆ, ‘ಇದನ್ನು ಮಾಡು’ ಅಂದರೆ ಅವನು ವಿಧೇಯತೆಯಿಂದ ಮಾಡುತ್ತಾನೆ. ನಿನಗೂ ಇದೇ ರೀತಿಯ ಅಧಿಕಾರವಿದೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.
“ನೀನು ನನ್ನನ್ನು ಸಮುದ್ರಕ್ಕೆ ಎಸೆದೆ. ನಿನ್ನ ಬಲವಾದ ತೆರೆಗಳು ನನ್ನ ಮೇಲೆ ಅಪ್ಪಳಿಸಿದವು. ನಾನು ನೀರಿನ ಆಳವಾದ ಸ್ಥಳಕ್ಕೆ ಮುಳುಗಿಹೋದೆ. ನಾನು ಸಮುದ್ರದ ನೀರಿನಿಂದ ಆವರಿಸಲ್ಪಟ್ಟೆನು.
ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು.