Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:20 - ಪರಿಶುದ್ದ ಬೈಬಲ್‌

20 ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಮಾಡಿ ಅದರ ಮೇಲೆ ಶುದ್ಧವಾದ ಎಲ್ಲಾ ಪಶುಪಕ್ಷಿಜಾತಿಗಳಲ್ಲಿ ಸರ್ವಾಂಗಹೋಮ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:20
27 ತಿಳಿವುಗಳ ಹೋಲಿಕೆ  

ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ನಮಗೊಂದು ಯಜ್ಞವಿದೆ. ಪವಿತ್ರ ಗುಡಾರದಲ್ಲಿ ಸೇವೆ ಸಲ್ಲಿಸುತ್ತಿರುವ ಯಾಜಕರು ನಮ್ಮ ಯಜ್ಞದಿಂದ ತಿನ್ನಲಾಗುವುದಿಲ್ಲ.


ಮೋಶೆಯು, “ನಾವು ನಮ್ಮ ಕುರಿಗಳನ್ನೂ ದನಕರುಗಳನ್ನೂ ಕಾಣಿಕೆಗಳಿಗಾಗಿ ಮತ್ತು ಯಜ್ಞಗಳಿಗಾಗಿ ತೆಗೆದುಕೊಂಡು ಹೋಗಬೇಕು; ಮಾತ್ರವಲ್ಲದೆ


ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಆ ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಆ ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.


ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.


ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.


ಆದ್ದರಿಂದ ಆ ಸ್ಥಳದಲ್ಲಿ ಇಸಾಕನು ಯಜ್ಞವೇದಿಕೆಯನ್ನು ಕಟ್ಟಿ ಯೆಹೋವನನ್ನು ಆರಾಧಿಸಿದನು. ಇಸಾಕನು ಆ ಸ್ಥಳದಲ್ಲಿ ಪಾಳೆಯಮಾಡಿಕೊಂಡನು; ಅವನ ಸೇವಕರು ಅಲ್ಲಿ ಒಂದು ಬಾವಿಯನ್ನು ತೋಡಿದರು.


ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.


ಅಬ್ರಾಮನು ಯಜ್ಞವೇದಿಕೆಯನ್ನು ಕಟ್ಟಿದ್ದು ಈ ಸ್ಥಳದಲ್ಲೇ. ಅಬ್ರಾಮನು ಯೆಹೋವನನ್ನು ಆರಾಧಿಸಿದ್ದು ಈ ಸ್ಥಳದಲ್ಲೇ.


ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು) ತೆಗೆದುಕೊ.


ಹೇಬೆಲನು ತನ್ನ ಕುರಿಮಂದೆಯಿಂದ ಒಳ್ಳೆಯ ಚೊಚ್ಚಲ ಕುರಿಗಳನ್ನು ಮತ್ತು ಅವುಗಳ ಒಳ್ಳೆಯ ಕೊಬ್ಬಿದ ಭಾಗಗಳನ್ನು ತಂದನು. ಯೆಹೋವನು ಹೇಬೆಲನ ಕಾಣಿಕೆಯನ್ನು ಸ್ವೀಕರಿಸಿದನು;


ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.


ಎಲ್ಲಾ ಪ್ರಾಣಿಗಳು, ಪಕ್ಷಿಗಳು, ಹರಿದಾಡುವ ಜೀವಿಗಳು ನಾವೆಯಿಂದ ಹೊರಬಂದವು.


ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.


ಎಲ್ಲಾ ಬಗೆಯ ಪಕ್ಷಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಉಳಿದ ಜೀವಿಗಳೆಲ್ಲ ನಾಶವಾದಮೇಲೆ, ಇವು ತಮ್ಮ ಸಂತತಿಗಳನ್ನು ಮುಂದುವರಿಸಲಿ.


ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.


ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು