ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.
ಭೂಮಿಯನ್ನು ಆವರಿಸಿಕೊಂಡಿದ್ದ ನೀರು ನೂರೈವತ್ತು ದಿನಗಳಾದ ಮೇಲೆ ಕ್ರಮೇಣವಾಗಿ ಕಡಿಮೆಯಾಗುತ್ತಾ ಬಂತು. ಏಳನೆಯ ತಿಂಗಳ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ನಾಡಿನಲ್ಲಿದ್ದ ಒಂದು ಬೆಟ್ಟದ ಮೇಲೆ ನಿಂತುಕೊಂಡಿತು.