11 ನಾನು ನಿಮಗೆ ಮಾಡುವ ವಾಗ್ದಾನವೇನೆಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.
11 ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.”
ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”
ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.
ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.