Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:20 - ಪರಿಶುದ್ದ ಬೈಬಲ್‌

20 ನೋಹನು ರೈತನಾದನು. ಅವನು ಒಂದು ದ್ರಾಕ್ಷಿತೋಟ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೋಹನು ವ್ಯವಸಾಯಗಾರ. ದ್ರಾಕ್ಷಿತೋಟ ಮಾಡುವುದನ್ನು ಪ್ರಾರಂಭಿಸಿದವನು ಅವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೋಹನು ವ್ಯವಸಾಯಗಾರನಾಗಿದ್ದನು; ಅವನೇ ದ್ರಾಕ್ಷೇತೋಟವನ್ನು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೋಹನು ವ್ಯವಸಾಯಗಾರನಾಗಿದ್ದನು. ಅವನು ಒಂದು ದ್ರಾಕ್ಷಿತೋಟವನ್ನು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:20
15 ತಿಳಿವುಗಳ ಹೋಲಿಕೆ  

ರಾಜನು ಸಹ ಸೇವಕನಾಗಿದ್ದಾನೆ; ಅವನ ದೇಶವು ಅವನನ್ನು ಗಳಿಸಿಕೊಂಡಿದೆ.


ಸೋಮಾರಿಯ ಹೊಲದ ಸಮೀಪದಲ್ಲೂ ಅಜ್ಞಾನಿಯ ದ್ರಾಕ್ಷಿತೋಟದ ಬಳಿಯಲ್ಲೂ ನಡೆದುಹೋದೆನು.


ತನ್ನ ಜಮೀನಿನಲ್ಲಿ ದುಡಿಯುವ ರೈತನಿಗೆ ಸಾಕಷ್ಟು ಆಹಾರವಿರುವುದು. ಆದರೆ ಮೂಢನು ಪ್ರಯೋಜನವಿಲ್ಲದ ಸಂಗತಿಗಳಲ್ಲಿ ತನ್ನ ಸಮಯವನ್ನು ಹಾಳುಮಾಡುವನು.


ಒಳ್ಳೆಯವನ ಮಾತುಗಳು ನೀರಿನ ಬುಗ್ಗೆಯಂತೆ ಜೀವದಾಯಕ. ಕೆಡುಕನ ಮಾತುಗಳಲ್ಲಿ ಕೆಟ್ಟದ್ದೇ ಅಡಗಿಕೊಂಡಿರುತ್ತದೆ.


“ನೀವು ಮದುವೆಯಾಗಲು ಕನ್ನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ.


ನಿಮ್ಮಲ್ಲಿ ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಫಲವನ್ನು ಕೂಡಿಸಿಲ್ಲದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನು ರಣರಂಗದಲ್ಲಿ ಮಡಿದರೆ ಅವನ ದ್ರಾಕ್ಷಿತೋಟದ ಫಲಗಳು ಬೇರೊಬ್ಬನ ಪಾಲಾಗುವುದು.


ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು.


ಆಮೇಲೆ, ಹವ್ವಳಿಗೆ ಮತ್ತೊಂದು ಮಗು ಜನಿಸಿತು. ಈ ಮಗುವೇ ಕಾಯಿನನ ತಮ್ಮನಾದ ಹೇಬೆಲ. ಹೇಬೆಲನು ಕುರುಬನಾದನು ಕಾಯಿನನು ರೈತನಾದನು.


ಆದ್ದರಿಂದ ಆತನು ಆದಾಮನನ್ನು ಅವನು ಉತ್ಪತ್ತಿಗೊಂಡಿದ್ದ ನೆಲದಲ್ಲಿ ವ್ಯವಸಾಯ ಮಾಡಲು ಬಲವಂತವಾಗಿ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.


ಸೈನ್ಯದಲ್ಲಿ ಸೇವೆಮಾಡುವ ಯಾವ ಸೈನಿಕನಾದರೂ ತನಗೆ ತಾನೇ ಸಂಬಳವನ್ನು ಕೊಡುವುದಿಲ್ಲ. ಯಾವ ದ್ರಾಕ್ಷಿತೋಟಗಾರನಾಗಲಿ ತಾನು ಬೆಳೆದ ಹಣ್ಣಿನಲ್ಲಿ ಸ್ವಲ್ಪವನ್ನು ತಿನ್ನದೆ ಇರುವುದಿಲ್ಲ. ಹಸುಗಳನ್ನು ಸಾಕಿದ ಯಾವನೇ ಆಗಲಿ ಅವುಗಳ ಹಾಲಿನಲ್ಲಿ ಸ್ವಲ್ಪವನ್ನು ಕುಡಿಯದೆ ಇರುವುದಿಲ್ಲ.


ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ನನ್ನನ್ನು ನೇಮಿಸಿದರು. ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ.


ಈ ಮೂವರು ನೋಹನ ಗಂಡುಮಕ್ಕಳು. ಭೂಮಿಯ ಮೇಲಿರುವ ಜನರೆಲ್ಲರಿಗೂ ಇವರೇ ಮೂಲಪುರುಷರು.


ಒಮ್ಮೆ ಅವನು ದ್ರಾಕ್ಷಾರಸವನ್ನು ಕುಡಿದು ಮತ್ತೇರಿದ್ದರಿಂದ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು