ಆದಿಕಾಂಡ 9:27 - ಪರಿಶುದ್ದ ಬೈಬಲ್27 ದೇವರು ಯೆಫೆತನಿಗೆ ಹೆಚ್ಚು ಭೂಮಿಯನ್ನು ಕೊಡಲಿ. ಶೇಮನ ಗುಡಾರಗಳಲ್ಲಿ ದೇವರು ವಾಸಿಸಲಿ ಮತ್ತು ಕಾನಾನನು ಅವರಿಗೆ ಗುಲಾಮನಾಗಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 "ಅಭಿವೃದ್ಧಿಯನು ನೀಡಲಿ ದೇವರು ಯೆಫೆತನಿಗೆ ವಾಸವಾಗಿರಲಿವನು ಶೇಮನ ಗುಡಾರದೊಳಗೆ, ದಾಸನಾಗಿರಲಿ ಕಾನಾನನು ಯೆಫೆತನಿಗೆ” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆಫೆತನನ್ನು ದೇವರು ವಿಸ್ತರಿಸಲಿ. ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ. ಕಾನಾನನು ಅವರಿಗೆ ದಾಸನಾಗಿರಲಿ ಎಂಬದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆಫೆತನ ಮೇರೆಗಳನ್ನು ದೇವರು ವಿಸ್ತರಿಸಲಿ. ಯೆಫೆತನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಯೆಫೆತನಿಗೆ ದಾಸನಾಗಿರಲಿ.” ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.