Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:1 - ಪರಿಶುದ್ದ ಬೈಬಲ್‌

1 ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:1
23 ತಿಳಿವುಗಳ ಹೋಲಿಕೆ  

ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವೆ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವೆ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.


ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.


ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಡನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.


ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.


ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು.


ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ. ಯೆಹೂದ ಮತ್ತು ಜೆರುಸಲೇಮಿನಲ್ಲಿ ನಡೆಯಲಿದ್ದ ಘಟನೆಗಳ ಬಗ್ಗೆ ದೇವರು ಯೆಶಾಯನಿಗೆ ಈ ದರ್ಶನ ನೀಡಿದನು; ಯೆಹೂದದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ ಮತ್ತು ಹಿಜ್ಕೀಯರ ಕಾಲದಲ್ಲಿ ಯೆಶಾಯನಿಗೆ ಈ ದರ್ಶನವಾಯಿತು.


ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರೇಲರ ರಾಜನೂ ಯೋವಾಷನ ಮಗನೂ ಆದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲಾರಂಭಿಸಿದನು. ಯಾರೊಬ್ಬಾಮನು ನಲವತ್ತೊಂದು ವರ್ಷ ಆಳಿದನು.


ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.


ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.


ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ, ಯೋಥಾಮ, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ.


ನಂತರ ಯೆಹೂದದ ಜನರೆಲ್ಲರೂ ಅಜರ್ಯನನ್ನು ನೂತನ ರಾಜನನ್ನಾಗಿ ಮಾಡಿದರು. ಅಜರ್ಯನಿಗೆ ಹದಿನಾರು ವರ್ಷ ವಯಸ್ಸಾಗಿತ್ತು.


“ಯೆರೆಮೀಯನೇ, ನೀನು ಈ ಸಂಗತಿಗಳನ್ನು ಯೆಹೂದದ ಜನರಿಗೆ ಹೇಳು. ಆದರೆ ಅವರು ನಿನ್ನ ಮಾತುಗಳನ್ನು ಕೇಳುವದಿಲ್ಲ.


ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.


ಗಲಿಲಾಯ ಸರೋವರದ ತೀರದಲ್ಲಿ ಯೇಸು ತಿರುಗಾಡುತ್ತಾ ಇದ್ದನು. ಆತನು ಸೀಮೋನ (ಈತನನ್ನೇ ಪೇತ್ರ ಎಂದು ಕರೆಯಲಾಯಿತು.) ಮತ್ತು ಸೀಮೋನನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರನ್ನು ಕಂಡನು. ಬೆಸ್ತರಾಗಿದ್ದ ಇವರಿಬ್ಬರು ಅಂದು ಸರೋವರದ ತೀರದಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದರು.


ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಬಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಬರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು