Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:12 - ಪರಿಶುದ್ದ ಬೈಬಲ್‌

12 ಆದ್ದರಿಂದ ನಾನು ತೇಮಾನಿನಲ್ಲಿ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ಬೋಚ್ರದ ಉನ್ನತ ಗೋಪುರಗಳನ್ನು ನಾಶಮಾಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದುದರಿಂದ ನಾನು ತೇಮಾನ್ ಪಟ್ಟಣದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೊಚ್ರದ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೊಚ್ರದ ಕೋಟೆಗಳನ್ನು ದಹಿಸಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:12
14 ತಿಳಿವುಗಳ ಹೋಲಿಕೆ  

ಎದೋಮ್ಯರಿಗೆ ಯೆಹೋವನು ಮಾಡಬೇಕೆಂದಿರುವುದನ್ನು ಕೇಳಿರಿ. ತೇಮಾನ್ಯರ ಬಗ್ಗೆ ಯೆಹೋವನು ಏನು ನಿರ್ಧರಿಸಿದ್ದಾನೆಂಬುದನ್ನು ಕೇಳಿರಿ. ಎದೋಮಿನ ಕುರಿಮರಿಗಳನ್ನು (ಜನರನ್ನು) ಶತ್ರು ಎಳೆದುಕೊಂಡು ಹೋಗುವನು. ಸಂಭವಿಸಿದ ಸಂಗತಿಯನ್ನು ನೋಡಿ ಎದೋಮಿನ ಹುಲ್ಲುಗಾವಲುಗಳು ಬೆದರುವವು.


ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ತೇಮಾನ್ ಪಟ್ಟಣನಿವಾಸಿಗಳಲ್ಲಿ ಈಗ ಬುದ್ಧಿ ಉಳಿದಿಲ್ಲವೇ? ಎದೋಮಿನ ವಿವೇಕಿಗಳು ಒಳ್ಳೆಯ ಸಲಹೆಗಳನ್ನು ಕೊಡಲು ಸಮರ್ಥರಾಗಿಲ್ಲವೇ? ಅವರು ತಮ್ಮ ಜ್ಞಾನವನ್ನು ಕಳೆದುಕೊಂಡರೇ?


ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.


ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”


ಆತನು ಬೊಚ್ರದಲ್ಲಿ ಮತ್ತು ಎದೋಮಿನಲ್ಲಿ ಕೊಲ್ಲುವ ಸಮಯವನ್ನು ನಿರ್ಧರಿಸಿರುತ್ತಾನೆ. ಯೆಹೋವನ ಖಡ್ಗವು ವಪೆಯಿಂದಲೂ, ಕುರಿಹೋತಗಳ ರಕ್ತದಿಂದಲೂ, ಟಗರುಗಳ ಪಿತ್ತಕೋಶದ ಕೊಬ್ಬಿನಿಂದಲೂ ರಕ್ತಭರಿತವಾಗಿದೆ.


ಬೆಲಗನು ಸತ್ತಮೇಲೆ, ಯೋಬಾಬನು ರಾಜನಾದನು. ಯೋಬಾಬನು ಬೊಚ್ರದವನಾದ ಚೆರಹನ ಮಗನು.


ಎಲೀಫಜನಿಗೆ ಐದು ಮಂದಿ ಗಂಡುಮಕ್ಕಳಿದ್ದರು: ತೇಮಾನ್, ಓಮಾರ್, ಚೆಪೋ, ಗತಾಮ್ ಮತ್ತು ಕೆನಜ್.


“ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯತೀರಿಸಿದ್ದಾನೆ. ಆದ್ದರಿಂದ ಅವರು ಸಾಯಬೇಕು.


ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.


ಒಬದ್ಯನಿಗೆ ಆದ ದೈವದರ್ಶನ. ನನ್ನ ಒಡೆಯನಾದ ಯೆಹೋವನು ಎದೋಮಿನ ಬಗ್ಗೆ ಹೀಗೆ ಹೇಳುತ್ತಾನೆ: ದೇವರಾದ ಯೆಹೋವನಿಂದ ನಾವು ಒಂದು ಸುದ್ಧಿ ಕೇಳಿದೆವು. ಒಬ್ಬ ಸಂದೇಶದೂತನು ಜನಾಂಗಗಳ ಕಡೆಗೆ ಕಳುಹಿಸಲ್ಪಟ್ಟನು. ಅವನು ಹೇಳಿದ್ದೇನೆಂದರೆ, “ಬನ್ನಿ, ನಾವು ಎದೋಮಿಗೆ ವಿರುದ್ಧವಾಗಿ ಯುದ್ಧಮಾಡೋಣ.”


ತೇಮಾನಿನಿಂದ ಯೆಹೋವನು ಬರುತ್ತಿದ್ದಾನೆ. ಪರಿಶುದ್ಧನಾದವನು ಪಾರಾನ್ ಪರ್ವತದಿಂದ ಬರುತ್ತಿದ್ದಾನೆ. ಯೆಹೋವನ ಮಹಿಮೆಯು ಆಕಾಶಮಂಡಲವನ್ನು ಮುಚ್ಚುತ್ತದೆ. ಅವನ ಸ್ತೋತ್ರವು ಭೂಲೋಕವನ್ನು ತುಂಬುತ್ತದೆ.


ಬೆಳನು ಸತ್ತಾಗ ಜೆರಹನ ಮಗನಾದ ಯೋಬಾಬನು ಅರಸನಾದನು. ಇವನು ಬೊಚ್ರ ಎಂಬ ಊರಿನವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು