Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:14 - ಪರಿಶುದ್ದ ಬೈಬಲ್‌

14 ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದಕಾರಣ ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಆಗ ಯುದ್ಧಾರ್ಭಟವೂ ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ರಬ್ಬದ ಕೋಟೆಯಲ್ಲಿ ಬೆಂಕಿಯನ್ನು ಉರಿಸುವೆನು, ಅದು ಅವರ ಅರಮನೆಗಳನ್ನು ನುಂಗಿಬಿಡುವದು; ಆ ಯುದ್ಧದಿನದಲ್ಲಿ ಆರ್ಭಟವಾಗುವದು. ಆ ಸುಂಟರಗಾಳಿಯ ದಿವಸದಲ್ಲಿ ರೋಷಮಾರುತವು ಬೀಸುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:14
20 ತಿಳಿವುಗಳ ಹೋಲಿಕೆ  

ಆದ್ದರಿಂದ ಮೋವಾಬಿನಲ್ಲಿ ನಾನು ಬೆಂಕಿಯನ್ನು ಹಾಕುವೆನು. ಅದು ಕೆರಿಯೋತಿನ ಉನ್ನತ ಗೋಪುರಗಳನ್ನು ನಾಶಮಾಡುವದು. ಅಲ್ಲಿ ಭಯಂಕರವಾದ ಕೂಗಾಟವೂ ತುತ್ತೂರಿಯ ಧ್ವನಿಯೂ ಇರುತ್ತದೆ. ಆಗ ಮೋವಾಬು ಸಾಯುವದು.


ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ:


(ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಯೋವಾಬನು ಅಮ್ಮೋನಿಯರ ರಾಜಧಾನಿಯಾದ ರಬ್ಬಕ್ಕೆ ವಿರುದ್ಧವಾಗಿ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.


ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”


“ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.


“‘ನಾನು ರಬ್ಬಾ ನಗರವನ್ನು ಒಂಟೆಗಳು ಮೇಯುವ ಸ್ಥಳವನ್ನಾಗಿಯೂ, ಅಮ್ಮೋನ್ ದೇಶವನ್ನು ಕುರಿಹಟ್ಟಿಯನ್ನಾಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು.


ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.


ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು. ಸುಂಟರ ಗಾಳಿಯಂತೆ ಅವರನ್ನು ನಡುಗಿಸು.


ತುತ್ತೂರಿಯ ಧ್ವನಿಗೆ ಕುದುರೆಯು, “ಆಹಾ!” ಎಂದು ಹೇಳುತ್ತದೆ. ಅದು ದೂರದಿಂದಲೇ ಯುದ್ಧವನ್ನು ಮೂಸಿ ನೋಡಿ ತಿಳಿಯುವುದು. ಸೇನಾಧಿಪತಿಗಳು ಗಟ್ಟಿಯಾಗಿ ಅಪ್ಪಣೆಕೊಡುವುದನ್ನೂ ಯುದ್ಧದ ಎಲ್ಲಾ ಕೂಗಾಟವನ್ನೂ ಅದು ಕೇಳಿಸಿಕೊಳ್ಳುತ್ತದೆ.


ವಸಂತಕಾಲದಲ್ಲಿ, ಎಲ್ಲಾ ರಾಜರೂ ಯುದ್ಧಕ್ಕೆ ಹೊರಡುವ ಸಮಯ ಬಂದಾಗ, ದಾವೀದನು ಯೋವಾಬನನ್ನೂ ಅವನ ಸೇವಕರನ್ನೂ ಮತ್ತು ಇಸ್ರೇಲರೆಲ್ಲರನ್ನೂ ಅಮ್ಮೋನಿಯರೊಂದಿಗೆ ಯುದ್ಧಮಾಡಲು ಕಳುಹಿಸಿದನು. ಯೋವಾಬನ ಸೈನ್ಯವು ರಬ್ಬಕ್ಕೆ ಮುತ್ತಿಗೆ ಹಾಕಿತು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು.


ವಸಂತಕಾಲದಲ್ಲಿ ರಾಜರುಗಳು ಯುದ್ಧಕ್ಕೆ ಹೊರಡುವ ಸಮಯ. ಯೋವಾಬನೂ ತನ್ನ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟನು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಇಸ್ರೇಲಿನ ಸೈನ್ಯವು ಅಮ್ಮೋನ್ ದೇಶದೊಳಗೆ ನುಗ್ಗಿ ಅದನ್ನು ನಾಶಮಾಡಿದರು. ಆಮೇಲೆ ರಬ್ಬ ಪಟ್ಟಣಕ್ಕೆ ಮುತ್ತಿಗೆಹಾಕಿ ಸಂಪೂರ್ಣವಾಗಿ ನಾಶಮಾಡಿದರು.


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.


ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು. ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು.


ಯಾವ ಮಾರ್ಗದಲ್ಲಿ ಖಡ್ಗವು ಬರುವದೋ ಆ ದಾರಿಯನ್ನು ಗುರುತಿಸು. ಒಂದು ರಸ್ತೆಯು ಅಮ್ಮೋನಿಯರ ನಗರವಾದ ರಬ್ಬಾಗೆ ಹೋಗುವದು. ಇನ್ನೊಂದು ಮಾರ್ಗವು ಯೆಹೂದದಲ್ಲಿರುವ ಭದ್ರಪಡಿಸಲ್ಪಟ್ಟ ಪಟ್ಟಣವಾಗಿರುವ ಜೆರುಸಲೇಮಿಗೆ ಹೋಗುವುದು.


“ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.


ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.’”


ದಾವೀದನು ರಬ್ಬ ನಗರದ ಜನರನ್ನು ಹೊರದೂಡಿದನು. ದಾವೀದನು ಅವರನ್ನು ಗರಗಸ, ಕಬ್ಬಿಣದ ಗುದ್ದಲಿ ಮತ್ತು ಕೊಡಲಿಗಳಿಂದ ಕೆಲಸ ಮಾಡಿಸಿದನು. ಅವನು ಅವರಿಂದ ಬಲವಂತವಾಗಿ ಇಟ್ಟಿಗೆಗಳಿಂದ ಕಟ್ಟಡವನ್ನು ಕಟ್ಟಿಸಿದನು. ಅಮ್ಮೋನಿಯರ ನಗರಗಳಲ್ಲೆಲ್ಲಾ ದಾವೀದನು ಇದೇ ರೀತಿ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂದಿರುಗಿದನು.


ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು