“ಹೆಷ್ಬೋನಿನ ಜನರೇ, ಗೋಳಾಡಿರಿ; ಏಕೆಂದರೆ ಆಯಿ ಎಂಬ ಪಟ್ಟಣ ನಾಶವಾಯಿತು. ರಬ್ಬಾದ ಸ್ತ್ರೀಯರೇ, ಅಮ್ಮೋನಿನ ಸ್ತ್ರೀಯರೇ, ಗೋಳಾಡಿರಿ. ದುಃಖಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಗೋಳಾಡಿರಿ. ರಕ್ಷಣೆಗಾಗಿ ನಗರಕ್ಕೆ ಓಡಿಹೋಗಿರಿ. ಏಕೆಂದರೆ ನಿಮ್ಮ ಶತ್ರುಗಳು ಬರುತ್ತಿದ್ದಾರೆ. ಅವರು ಮಲ್ಕಾಮ್ ದೇವತೆಯನ್ನು ತೆಗೆದುಕೊಂಡು ಹೋಗುತ್ತಾರೆ. ಶತ್ರುಗಳು ಮಲ್ಕಾಮ್ ದೇವತೆಯ ಯಾಜಕರನ್ನೂ ಪ್ರಧಾನರನ್ನೂ ತೆಗೆದುಕೊಂಡು ಹೋಗುವರು.