Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:2 - ಪರಿಶುದ್ದ ಬೈಬಲ್‌

2 ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಮೋಸನು ಹೀಗೆ ಪ್ರಕಟಿಸಿದನು - ಯೆಹೋವನು ಚೀಯೋನಿನಿಂದ ಗರ್ಜಿಸಿ ಯೆರೂಸಲೇವಿುನಿಂದ ದನಿಗೈಯುವನು; ಆಗ ಕುರುಬರ ಕಾವಲುಗಳು ಗೋಳಿಡುವವು, ಕರ್ಮೆಲ್ ಬೆಟ್ಟದ ತುದಿಯು ಒಣಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:2
23 ತಿಳಿವುಗಳ ಹೋಲಿಕೆ  

ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.


“ಯೆರೆಮೀಯನೇ, ನೀನು ಅವರಿಗೆ ಈ ಸಂದೇಶವನ್ನು ಕೊಡು: ‘ಉನ್ನತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಲುಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಾರಸವನ್ನು ತಯಾರಿಸುವಾಗ ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದುಬಿಡುವೆನು. ಸಮುದ್ರ ತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು.


ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.


ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.


ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿಹೋಗುವದು.


ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.


ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”


“‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’”


“ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇದಿನೇ ನಿಬರ್ಲರಾಗುತ್ತಾರೆ. ಆ ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಾರೆ.


ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.


ದೇಶವು ಅಸ್ವಸ್ಥತೆಯಿಂದ ಸಾಯುತ್ತಿದೆ. ಲೆಬನೋನ್ ನಾಚಿಗೊಂಡು ಒಣಗುತ್ತಿದೆ. ಶಾರೋನ್ ತಗ್ಗು ಒಣಗಿ ನಿರ್ಜನವಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಿಂದೆ ಬಹು ಅಂದವಾದ ಸಸಿಗಳನ್ನು ಬೆಳೆಯಿಸುತ್ತಿದ್ದವು. ಈಗ ಅವುಗಳು ಅಲ್ಲಿ ಬೆಳೆಯುವದಿಲ್ಲ.


ರಾಜನ ಕೋಪವು ಸಿಂಹದ ಘರ್ಜನೆಯಂತಿದೆ. ರಾಜನನ್ನು ಕೋಪಗೊಳಿಸಿದರೆ ಪ್ರಾಣಕ್ಕೆ ಹಾನಿ.


ಮಾವೋನ್‌ನಲ್ಲಿ ಒಬ್ಬ ಮನುಷ್ಯನು ವಾಸಿಸುತ್ತಿದ್ದನು. ಈ ಮನುಷ್ಯನು ಬಹಳ ಶ್ರೀಮಂತನಾಗಿದ್ದನು. ಅವನು ಮೂರು ಸಾವಿರ ಕುರಿಗಳನ್ನೂ ಒಂದು ಸಾವಿರ ಆಡುಗಳನ್ನೂ ಹೊಂದಿದ್ದನು. ಅವನು ಕರ್ಮೆಲಿನಲ್ಲಿ ವ್ಯಾಪಾರ ಮಾಡುತ್ತಿದ್ದನು. ಒಮ್ಮೆ ಅವನು ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕರ್ಮೆಲಿಗೆ ಹೋಗಿದ್ದನು.


ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.


ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಬಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಬರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.


ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.


ಯೆಹೋವನೇ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುತ್ತಿದ್ದೇನೆ. ನಮ್ಮ ಹಸಿರು ಹೊಲಗದ್ದೆಗಳು ಬೆಂಕಿಯಿಂದ ಮರುಭೂಮಿಯಾದವು. ಹೊಲದಲ್ಲಿದ್ದ ಮರಗಳನ್ನೆಲ್ಲಾ ಬೆಂಕಿಯು ದಹಿಸಿತು.


ಯೆಹೋವನ ಸ್ವರವು ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು