Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 1:6 - ಪರಿಶುದ್ದ ಬೈಬಲ್‌

6 ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಇಂತೆನ್ನುತ್ತಾನೆ - ಗಾಜವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋವಿುಗೆ ವಶಮಾಡಿಬಿಟ್ಟಿತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 1:6
18 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.


ಫಿಲಿಷ್ಟಿಯರು ಸಹ ಬೆಟ್ಟಪ್ರದೇಶಗಳ ಪಟ್ಟಣಗಳ ಮೇಲೆಯೂ ಧಾಳಿ ಮಾಡಿದರು. ಬೇತ್ಷಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ, ತಿಮ್ನಾ ಮತ್ತು ಗಿಮ್ಜೋ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಅಲ್ಲದೆ ಆ ಪಟ್ಟಣಗಳ ಸುತ್ತಮುತ್ತಲಿನ ಊರುಗಳನ್ನೂ ವಶಪಡಿಸಿಕೊಂಡರು. ಫಿಲಿಷ್ಟಿಯರು ಆ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.


ನೀನು ಇಸ್ರೇಲರ ವೈರಿಯೊಂದಿಗೆ ಸೇರಿಕೊಂಡೆ. ಅನ್ಯರು ಇಸ್ರೇಲಿನ ಐಶ್ವರ್ಯವನ್ನು ಎತ್ತಿಕೊಂಡು ಹೋದರು. ಪರದೇಶಿಗಳು ಇಸ್ರೇಲ್ ಪಟ್ಟಣದ ಬಾಗಿಲನ್ನು ಪ್ರವೇಶಿಸಿದರು. ಆ ಪರದೇಶಿಗಳು ಜೆರುಸಲೇಮಿನ ಯಾವ ಭಾಗ ತಮಗೆ ದೊರಕಬೇಕೆಂದು ಚೀಟುಹಾಕಿದರು. ಆಗ ನೀನು ನಿನ್ನ ಪಾಲನ್ನು ತೆಗೆದುಕೊಳ್ಳಲು ಅವರೊಂದಿಗಿದ್ದೆ.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.


ಈ ರೀತಿ ಫಿಲಿಷ್ಟಿಯರು ತಾವು ಯೆಹೋವನಿಗೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಚಿನ್ನದ ಗಡ್ಡೆಗಳನ್ನು ಕಾಣಿಕೆಗಳನ್ನಾಗಿ ಕಳುಹಿಸಿದರು. ಅವರು ಪ್ರತಿಯೊಂದು ಫಿಲಿಷ್ಟಿಯ ನಗರಕ್ಕೆ ಒಂದರಂತೆ ಚಿನ್ನದ ಗಡ್ಡೆಗಳನ್ನು ಕಳುಹಿಸಿದ್ದರು. ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಮತ್ತು ಎಕ್ರೋನ್‌ಗಳೇ ಆ ನಗರಗಳು.


“ನೀವು ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿರಿ. ಆ ರೀತಿಯಾಗಿ ಅವರನ್ನು ಅವರ ದೇಶದಿಂದ ಬಹಳ ದೂರ ತೆಗೆದುಬಿಟ್ಟಿರಿ.


ಯಾಕೆಂದರೆ ನೀನು ಯಾವಾಗಲೂ ನನ್ನ ಜನಕ್ಕೆ ವಿರೋಧವಾಗಿರುವೆ. ನೀನು ಇಸ್ರೇಲರ ವಿರುದ್ಧವಾಗಿ ಕತ್ತಿಯನ್ನೆತ್ತಿರುವೆ. ಅವರು ಆಗ ಸಂಕಟದಲ್ಲಿದ್ದರು ಮತ್ತು ತಮ್ಮ ಶಿಕ್ಷೆಯ ಕಡೆಗಾಲದಲ್ಲಿದ್ದರು.’”


“ಅಷ್ಕೆಲೋನಿನ ಜನರು ಇದನ್ನು ನೋಡಿ ಭಯಗ್ರಸ್ತರಾಗುವರು. ಗಾಜದ ಜನರು ಭಯದಿಂದ ನಡುಗುವರು. ಮತ್ತು ಎಕ್ರೋನಿನ ಜನರು ಇದನ್ನೆಲ್ಲಾ ನೋಡಿ ನಿರೀಕ್ಷೆ ಇಲ್ಲದವರಾಗಿರುವರು. ಗಾಜದಲ್ಲಿ ಯಾವ ಅರಸನೂ ಉಳಿಯನು. ಅಷ್ಕೆಲೋನಿನಲ್ಲಿ ಯಾರೂ ವಾಸಿಸರು.


ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.


ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಫಿಲಿಷ್ಟಿಯರ ಬಗ್ಗೆ ಬಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಈ ಸಂದೇಶ ಬಂದಿತು.


ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು.


“ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು.


ಅದಕ್ಕಾಗಿ ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಈ ಬೆಂಕಿಯು ಗಾಜದ ಎತ್ತರವಾದ ಗೋಪುರಗಳನ್ನು ನಾಶಮಾಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು