ಆಮೋಸ 1:8 - ಪರಿಶುದ್ದ ಬೈಬಲ್8 ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಅಷ್ದೋದಿನೊಳಗಿಂದ ಸಿಂಹಾಸನಾಸೀನನನ್ನೂ ಮತ್ತು ಅಷ್ಕೆಲೋನಿನೊಳಗಿಂದ ರಾಜದಂಡ ದಾರಿಯನ್ನೂ ನಿರ್ಮೂಲಮಾಡುವೆನು. ನಾನು ಎಕ್ರೋನಿನ ವಿರುದ್ಧವಾಗಿ ಕೈಯೆತ್ತುವೆನು, ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು.” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”