ಆಮೋಸ 1:9 - ಪರಿಶುದ್ದ ಬೈಬಲ್9 ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ಇಂತೆನ್ನುತ್ತಾನೆ - ತೂರ್ ಪಟ್ಟಣವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಜನರನ್ನು ಗುಂಪುಗುಂಪಾಗಿ ಎದೋವಿುಗೆ ವಶಮಾಡಿಬಿಟ್ಟಿತಷ್ಟೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು. ಅಧ್ಯಾಯವನ್ನು ನೋಡಿ |
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.