ಆಮೋಸ 2:11 - ಪರಿಶುದ್ದ ಬೈಬಲ್11 ನಿಮ್ಮ ಕೆಲವು ಗಂಡುಮಕ್ಕಳನ್ನು ನಾನು ಪ್ರವಾದಿಗಳನ್ನಾಗಿ ಮಾಡಿದೆನು. ಇನ್ನು ಕೆಲವರನ್ನು ನಾಜೀರರನ್ನಾಗಿ ಮಾಡಿದೆನು. ಇಸ್ರೇಲ್ ಜನರೇ, ಇವು ಸತ್ಯವಾದ ಮಾತುಗಳು,” ಇವು ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸತ್ಯವಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿಮ್ಮ ಪುತ್ರರಲ್ಲಿ ಕೆಲವರನ್ನು ಪ್ರವಾದಿಗಳನ್ನಾಗಿ, ನಿಮ್ಮ ಯುವಜನರಲ್ಲಿ ಕೆಲವರನ್ನು ನಾಜೀರರನ್ನಾಗಿ ಸಿದ್ಧಪಡಿಸಿದವನು ನಾನೇ. ಇಸ್ರಯೇಲಿನ ಜನರೇ, ಇದು ನಿಜವಲ್ಲವೇ? ನೀವೇ ಹೇಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಸಿದ್ಧಪಡಿಸಿದೆನು. ಇಸ್ರಾಯೇಲ್ಯರೇ, ಇದು ಸತ್ಯವಲ್ಲವೋ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)