Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:12 - ಪರಿಶುದ್ದ ಬೈಬಲ್‌

12 “ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನೀವಾದರೋ, ನಾಜೀರರು ವ್ರತಮುರಿದು ಮದ್ಯಪಾನ ಸೇವಿಸುವಂತೆ ಮಾಡಿದಿರಿ. ಪ್ರವಾದಿಗಳು ಪ್ರವಾದನೆ ಹೇಳದಂತೆ ಆಜ್ಞೆಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವೋ ಆ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಸಿದಿರಿ; ಪ್ರವಾದಿಗಳಿಗೆ ಪ್ರವಾದನೆ ಮಾಡಬೇಡಿರೆಂದು ಕಟ್ಟುಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:12
8 ತಿಳಿವುಗಳ ಹೋಲಿಕೆ  

ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.


ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.


ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.


ಅನಾತೋತಿನ ಜನರು ಯೆರೆಮೀಯನನ್ನು ಕೊಲೆ ಮಾಡಬೇಕೆಂದು ಯೋಚಿಸುತ್ತಿದ್ದರು. ಆ ಜನರು ಯೆರೆಮೀಯನಿಗೆ, “ಯೆಹೋವನ ಹೆಸರಿನಿಂದ ನೀನು ಪ್ರವಾದಿಸಬೇಡ, ನೀನು ಹಾಗೆ ಮಾಡಿದರೆ ನಾವು ನಿನ್ನ ಕೊಲೆ ಮಾಡುವೆವು” ಎಂದರು. ಅನಾತೋತಿನ ಆ ಜನರ ಬಗ್ಗೆ ಯೆಹೋವನು ಒಂದು ನಿರ್ಣಯವನ್ನು ತೆಗೆದುಕೊಂಡನು.


ಆದ್ದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ.


“ಈ ಸಂಗತಿಗಳನ್ನು ಇಸ್ರೇಲರಿಗೆ ಹೇಳು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರವ್ರತವನ್ನು ಮಾಡುವುದರ ಮೂಲಕ ತನ್ನನ್ನು ಪ್ರತಿಷ್ಠಿಸಿಕೊಂಡರೆ, ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡರೆ,


ಆಮೇಲೆ ನಾನು ದ್ರಾಕ್ಷಾರಸ ತುಂಬಿದ ಕೆಲವು ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ರೇಕಾಬ್ಯ ಕುಟುಂಬದವರ ಮುಂದಿಟ್ಟು, “ಸ್ವಲ್ಪ ದ್ರಾಕ್ಷಾರಸವನ್ನು ಕುಡಿಯಿರಿ” ಎಂದೆನು.


ಆ ಸಮಯದಲ್ಲಿ ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು; ದ್ರಾಕ್ಷಿಯ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣ ದ್ರಾಕ್ಷಿಯನ್ನು ಸಹ ತಿನ್ನಬಾರದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು