ಆಮೋಸ 2:13 - ಪರಿಶುದ್ದ ಬೈಬಲ್13 ನೀವು ನನಗೆ ಬಹು ಭಾರವಾಗಿದ್ದೀರಿ. ಬಂಡಿಯಲ್ಲಿ ಒತ್ತಿ ತುಂಬಿಸಿದಾಗ ಹೇಗೆ ಬಗ್ಗುತ್ತದೋ ಅದೇ ರೀತಿಯಲ್ಲಿ ನಾನು ಬಹುವಾಗಿ ಬಗ್ಗಿರುತ್ತೇನೆ. ಆದರೆ ನಾನು ನಿಮ್ಮನ್ನು ಅದೇ ರೀತಿಯಲ್ಲಿ ಬಗ್ಗಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದ್ದರಿಂದ ಧಾನ್ಯ ತುಂಬಿದ ಬಂಡೆ ನಸುಕುವಂತೆ ನಿಮ್ಮನ್ನು ಇದ್ದಲ್ಲಿಯೇ ನಸುಕಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಗಾಡಿಯಷ್ಟು ಭಾರವಾಗಿ ಅಮುಕಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು. ಅಧ್ಯಾಯವನ್ನು ನೋಡಿ |
ಇವೆಲ್ಲಾ ಯಾಕೆ ಸಂಭವಿಸಬೇಕು? ಯಾಕೆಂದರೆ ನೀನು ಎಳೆಯವಳಾಗಿದ್ದಾಗ ಏನು ಸಂಭವಿಸಿತೆಂದು ಮರೆತುಬಿಟ್ಟಿರುವೆ. ನೀನು ಕೆಟ್ಟಕೆಲಸಗಳನ್ನು ಮಾಡಿ ನಾನು ಕೋಪಿಸಿಕೊಳ್ಳುವಂತೆ ಮಾಡಿರುವೆ. ಆದ್ದರಿಂದ ಆ ಕೆಟ್ಟಕಾರ್ಯ ಮಾಡಿದ್ದಕ್ಕಾಗಿ ನಿನ್ನನ್ನು ಶಿಕ್ಷಿಸಬೇಕಾಗಿ ಬಂತು. ನೀನು ಅದಕ್ಕಿಂತಲೂ ಭಯಂಕರಕೃತ್ಯ ನಡಿಸಲು ಯೋಜನೆ ಹಾಕಿಕೊಂಡಿರುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.