Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:14 - ಪರಿಶುದ್ದ ಬೈಬಲ್‌

14 ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮಲ್ಲಿ ದೌಡೋಡುವವನು ಕೂಡ ತಲೆತಪ್ಪಿಸಿಕೊಳ್ಳಲಾರನು. ಬಲಿಷ್ಠನೂ ಬಲಹೀನನಾಗುವನು. ಪರಾಕ್ರಮಿಯೂ ಪ್ರಾಣ ಉಳಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ವೇಗಿಗೂ ಓಡಿಹೋಗುವದಕ್ಕೆ ಶಕ್ತಿಯಿರದು, ಬಲಿಷ್ಟನು ತನ್ನ ಬಲವನ್ನು ಸ್ಥಿರಪಡಿಸಿಕೊಳ್ಳನು, ಪರಾಕ್ರವಿುಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:14
9 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.


ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.


ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.


ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”


ಕುರುಬರಿಗೆ ಅಡಗಿಕೊಳ್ಳಲು ಸ್ಥಳ ಸಿಕ್ಕುವದಿಲ್ಲ. ಆ ನಾಯಕರುಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ಸಿಕ್ಕುವದಿಲ್ಲ.


ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು