Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 2:6 - ಪರಿಶುದ್ದ ಬೈಬಲ್‌

6 ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಇಸ್ರಾಯೇಲ್ಯರು ನ್ಯಾಯವಂತನನ್ನು ಬೆಳ್ಳಿಗೆ ಮಾರುತ್ತಾರೆ, ಒಂದು ಜೊತೆಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ವಿಕ್ರಯಿಸುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 2:6
21 ತಿಳಿವುಗಳ ಹೋಲಿಕೆ  

ನನ್ನ ಜನರಿಗಾಗಿ ಚೀಟು ಹಾಕಿದರು. ಅವರು ಹುಡುಗರನ್ನು ಮಾರಿ ಸೂಳೆಯನ್ನು ಕೊಂಡುಕೊಂಡರು; ಹುಡುಗಿಯರನ್ನು ಮಾರಿ ದ್ರಾಕ್ಷಾರಸವನ್ನು ಕೊಂಡುಕೊಂಡರು.


“ನೀವು ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿರಿ. ಆ ರೀತಿಯಾಗಿ ಅವರನ್ನು ಅವರ ದೇಶದಿಂದ ಬಹಳ ದೂರ ತೆಗೆದುಬಿಟ್ಟಿರಿ.


(ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)


ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ.


ಅಶ್ಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶ್ಶೂರಿಗೆ ಒಯ್ದನು. ಅವನು ಅವರನ್ನು ಹಲಹು ಎಂಬ ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.


ದೇವರು ಹೀಗೆ ಹೇಳಿದನು: “‘ನೋಡಿರಿ, ನಾನು ಕೈಯನ್ನು ಬಡಿದು ನಿಮ್ಮನ್ನು ನಿಲ್ಲಿಸಿ ಬಿಡುವೆನು. ನೀವು ಮೋಸ ಮಾಡಿದ್ದಕ್ಕಾಗಿಯೂ, ಜನರನ್ನು ಕೊಲೆ ಮಾಡಿದ್ದಕ್ಕಾಗಿಯೂ ನಿಮ್ಮನ್ನು ಶಿಕ್ಷಿಸುವೆನು.


ಅವರು ಬಡವರಿಗೆ ನ್ಯಾಯವಂತರಾಗಿರುವುದಿಲ್ಲ. ಅವರು ಬಡಜನರ ಹಕ್ಕನ್ನು ತೆಗೆದುಬಿಡುವರು. ಜನರು ವಿಧವೆಯರಿಂದಲೂ ಅನಾಥರಿಂದಲೂ ಹಣ ಕಿತ್ತುಕೊಳ್ಳುವಂತೆ ಮಾಡುವರು.


ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, ‘ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು