ಆಮೋಸ 2:8 - ಪರಿಶುದ್ದ ಬೈಬಲ್8 ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವು ಇಟ್ಟ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರು ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರತಿಯೊಂದು ಪ್ರಾರ್ಥನಾಲಯದಲ್ಲಿಯೂ ಮಲಗುತ್ತಾರೆ. ಬಡವರಿಂದ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆಯೇ ಬಿದ್ದಿರುತ್ತಾರೆ. ವಿಧಿ ಇಲ್ಲದೆ ದಂಡತೆರಬೇಕಾದವರಿಂದ ಹೆಂಡವನ್ನು ತಂದು ದೇವರ ಮಂದಿರದಲ್ಲೇ ಕುಡಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ. ಅಧ್ಯಾಯವನ್ನು ನೋಡಿ |