Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:1 - ಪರಿಶುದ್ದ ಬೈಬಲ್‌

1 ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರೇ, ಯೆಹೋವ ದೇವರು ನಿಮಗೆ ವಿರೋಧವಾಗಿ ಹೇಳುವ ವಾಕ್ಯವನ್ನು ಕೇಳಿರಿ. ನಾನು ಈಜಿಪ್ಟ್ ದೇಶದೊಳಗಿಂದ ಕರೆದುತಂದ ಸಮಸ್ತ ಕುಟುಂಬಕ್ಕೆ ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:1
18 ತಿಳಿವುಗಳ ಹೋಲಿಕೆ  

“ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು.


ಆಗ ನಾನು ಹೇಳಿದ್ದೇನೆಂದರೆ, “ಯಾಕೋಬಿನ ನಾಯಕರೇ, ಇಸ್ರೇಲಿನ ಅಧಿಪತಿಗಳೇ, ನನ್ನ ಮಾತನ್ನು ಕೇಳಿರಿ. ನ್ಯಾಯ ಏನು ಎಂದು ನಿಮಗೆ ತಿಳಿದಿರಬೇಕು.


“ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.


ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”


“ಯಾಕೋಬೇ, ನನಗೆ ಕಿವಿಗೊಡು. ಇಸ್ರೇಲೇ, ನೀವು ನನ್ನ ಜನರಾಗುವದಕ್ಕಾಗಿ ನಿಮ್ಮನ್ನು ನಾನು ಕರೆದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿರಿ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


ಸಭೆಯ ಮಧ್ಯದಲ್ಲಿ ನಿಂತುಕೊಂಡು ಯೆಹಜೀಯೇಲನು ಅವರಿಗೆ, “ರಾಜನಾದ ಯೆಹೋಷಾಫಾಟನೇ, ನನ್ನ ಮಾತನ್ನು ಕೇಳು. ಜೆರುಸಲೇಮಿನಲ್ಲಿಯೂ ಯೆಹೂದದ ರಾಜ್ಯದಲ್ಲಿಯೂ ವಾಸಿಸುವ ಸರ್ವಜನರೇ, ನನ್ನ ಮಾತನ್ನು ಕೇಳಿರಿ. ಯೆಹೋವನು ನಿಮಗೆ ಹೀಗೆನ್ನುತ್ತಾನೆ: ‘ಆ ದೊಡ್ಡ ಸೈನ್ಯಕ್ಕೆ ಹೆದರಿ ಚಿಂತೆಗೊಳಗಾಗಬೇಡಿ. ಯಾಕೆಂದರೆ ಯುದ್ಧವು ನಿಮ್ಮದಲ್ಲ, ಅದು ದೇವರದೇ!


ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


“ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.


ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”


ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಈ ಕುಟುಂಬದ ವಿರುದ್ಧವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವೆ.


ಫಿಲಿಷ್ಟಿಯ ಜನರೇ, ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರೇ, ಯೆಹೋವನಿಂದ ಬಂದ ಸಂದೇಶ ನಿಮಗಾಗಿಯೇ. ಕಾನಾನ್ ದೇಶವೇ, ಪಾಲೆಸ್ತೀನ್ ದೇಶವೇ, ನೀವು ನಾಶಗೊಳ್ಳುವಿರಿ. ನಿಮ್ಮಲ್ಲಿ ಯಾರೂ ವಾಸಿಸರು.


ಆತನ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನ್ಯಾಯನಿರ್ಣಯಗಳನ್ನೂ ಜ್ಞಾಪಿಸಿಕೊಳ್ಳಿರಿ.


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು