ಆಮೋಸ 3:11 - ಪರಿಶುದ್ದ ಬೈಬಲ್11 ಆದ್ದರಿಂದ ಯೆಹೋವನು ಹೇಳುವುದೇನೆಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಿಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀಗಿರಲು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ: “ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು. ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು ಮತ್ತು ನಿನ್ನ ಅರಮನೆಗಳು ಸೂರೆಯಾಗುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಂತಿರಲು ಸ್ವಾಮಿ ಸರ್ವೇಶ್ವರ ಹೇಳುವುದೇನೆಂದರೆ: “ಶತ್ರುಗಳು ನಿಮ್ಮ ನಾಡಿಗೆ ಮುತ್ತಿಗೆಹಾಕುವರು. ನಿಮ್ಮ ಕೋಟೆಕೊತ್ತಲಗಳನ್ನು ನೆಲಸಮಮಾಡುವರು. ನಿಮ್ಮ ಸೌಧಗಳನ್ನು ಸೂರೆಮಾಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು, ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು, ನಿನ್ನ ಅರಮನೆಗಳು ಸೂರೆಯಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ವಿರೋಧಿಯು ದೇಶದ ಸುತ್ತಲೂ ಇರುವನು. ನಿನ್ನ ಬಲವನ್ನು ತಗ್ಗಿಸುವನು. ನಿನ್ನ ಅರಮನೆಗಳು ಸೂರೆಯಾಗುವುವು.” ಅಧ್ಯಾಯವನ್ನು ನೋಡಿ |
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.