ಆಮೋಸ 3:13 - ಪರಿಶುದ್ದ ಬೈಬಲ್13 ಸರ್ವಶಕ್ತನೂ ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋಬನ ಕುಟುಂಬದವರಿಗೆ ಈ ವಿಷಯವನ್ನು ತಿಳಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ; ಕೇಳಿರಿ, ಯಾಕೋಬ ವಂಶದವರಿಗೆ ವಿರುದ್ಧವಾಗಿ ಸಾಕ್ಷಿಕೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈಗ ಕೇಳಿ, ಯಕೋಬನ ವಂಶದವರಿಗೆ ಎಚ್ಚರಿಕೆ ನೀಡಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ - ಕೇಳಿರಿ, ಯಾಕೋಬ ವಂಶದವರಿಗೆ ಎಚ್ಚರ ಹೇಳಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸರ್ವಶಕ್ತ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: “ನೀವು ಕೇಳಿ, ಯಾಕೋಬಿನ ಮನೆತನದವರಿಗೆ ವಿರುದ್ಧವಾಗಿ ಸಾಕ್ಷಿ ಕೊಡಿರಿ.” ಅಧ್ಯಾಯವನ್ನು ನೋಡಿ |
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.