Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:14 - ಪರಿಶುದ್ದ ಬೈಬಲ್‌

14 ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನು ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಸ್ರಯೇಲರ ಪಾಪಕೃತ್ಯಗಳಿಗಾಗಿ ಅವರನ್ನು ದಂಡಿಸುವೆನು. ಬೇತೇಲಿನ ಯಜ್ಞವೇದಿಗಳನ್ನು ಚೂರುಚೂರು ಮಾಡುವೆನು. ಆ ಯಜ್ಞವೇದಿಯ ಮೂಲೆಕೊಂಬುಗಳನ್ನು ಕತ್ತರಿಸಿ ಬೀದಿಪಾಲಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅದಕ್ಕೆ ಮುಯ್ಯಿತೀರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು; ಯಜ್ಞವೇದಿಯ ಕೊಂಬುಗಳು ಕತ್ತರಿಸಲ್ಪಟ್ಟು ನೆಲದ ಪಾಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:14
15 ತಿಳಿವುಗಳ ಹೋಲಿಕೆ  

ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.


ಯಜ್ಞವೇದಿಕೆಯ ಬಳಿಯಲ್ಲಿ ನನ್ನ ಒಡೆಯನು ನಿಂತಿರುವುದನ್ನು ಕಂಡೆನು. ಆತನು ಹೇಳಿದ್ದೇನೆಂದರೆ, “ಸ್ತಂಭಗಳ ಮೇಲೆ ಹೊಡೆಯಿರಿ, ಆಗ ಕಟ್ಟಡವು ಹೊಸ್ತಿಲಿನ ತನಕ ಕಂಪಿಸುವದು. ಸ್ತಂಭಗಳು ಜನರ ತಲೆಗಳ ಮೇಲೆ ಕುಸಿದುಬೀಳುವಂತೆ ಮಾಡಿರಿ. ಅದರಿಂದ ಸಾಯದೆ ಉಳಿಯುವವರನ್ನು ನಾನು ಖಡ್ಗದಿಂದ ಸಾಯಿಸುವೆನು. ಅದರಿಂದ ತಪ್ಪಿಸಿಕೊಂಡು ಓಡಿಹೋಗಲು ಒಬ್ಬನು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಒಬ್ಬನಾದರೂ ತಪ್ಪಿಸಿಕೊಳ್ಳುವುದಿಲ್ಲ.


ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.


ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.


ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು.


ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ.


ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.


ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.


ಇಸಾಕನ ವೇದಿಕೆಗಳೆಲ್ಲಾ ನಾಶವಾಗುವದು. ಇಸ್ರೇಲಿನ ಪವಿತ್ರ ಸ್ಥಳಗಳೆಲ್ಲಾ ಬಂಡೆಯ ರಾಶಿಯಾಗಿ ಮಾರ್ಪಡುವವು. ಯಾರೊಬ್ಬಾಮನ ಕುಟುಂಬದ ಮೇಲೆ ಆಕ್ರಮಣ ಮಾಡಿ ಅವರನ್ನು ಸಂಹರಿಸುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು