Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:15 - ಪರಿಶುದ್ದ ಬೈಬಲ್‌

15 ಬೇಸಿಗೆ ಕಾಲದ ಅರಮನೆಯೊಂದಿಗೆ ಚಳಿಗಾಲದ ಅರಮನೆಯನ್ನೂ ನಾಶಮಾಡುವೆನು. ದಂತದ ಭವನಗಳನ್ನು ನಾಶಮಾಡುವೆನು, ಇತರ ಎಷ್ಟೋ ಮನೆಗಳು ನಾಶವಾಗುವವು.” ಇವು ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಚಳಿಗಾಲದ ಅರಮನೆಯನ್ನೂ, ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು. ದಂತಮಂದಿರಗಳು ಹಾಳಾಗುವವು ಮತ್ತು ದೊಡ್ಡಮನೆಗಳು ಕೊನೆಗಾಣುವವು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಚಳಿಗಾಲ, ಬೇಸಿಗೆಕಾಲಗಳ ವಿಹಾರಗೃಹಗಳನ್ನು ವಿನಾಶಮಾಡುವೆನು. ದಂತನಿರ್ಮಿತ ಮಂದಿರಗಳು ಧ್ವಂಸವಾಗುವುವು. ಮಹಾಸೌಧಗಳು ನೆಲಸಮವಾಗುವುವು. ಸರ್ವೇಶ್ವರಸ್ವಾಮಿಯ ನುಡಿಯಿದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಚಳಿಗಾಲದ ಅರಮನೆಯನ್ನೂ ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು; ದಂತಮಂದಿರಗಳು ಹಾಳಾಗುವವು, ಮಹಾಸೌಧಗಳು ಕೊನೆಗಾಣುವವು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತ ಮಂದಿರಗಳು ನಾಶವಾಗುವುವು. ದೊಡ್ಡ ಮನೆಗಳು ಕೊನೆಗಾಣುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:15
10 ತಿಳಿವುಗಳ ಹೋಲಿಕೆ  

ಅದು ನಡೆದದ್ದು ಒಂಭತ್ತನೇ ತಿಂಗಳಲ್ಲಿ, ರಾಜನಾದ ಯೆಹೋಯಾಕೀಮನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು. ರಾಜನ ಎದುರಿಗಿದ್ದ ಒಂದು ಸಣ್ಣ ಅಗ್ಗಿಷ್ಟಿಕೆಯಲ್ಲಿ ಬೆಂಕಿಯು ಉರಿಯುತ್ತಿತು.


ರಾಜನಾದ ಅಹಾಬನು ತನ್ನ ಆಳ್ವಿಕೆಯ ಕಾಲದಲ್ಲಿ ಮಾಡಿದ ಸಂಗತಿಗಳನ್ನೆಲ್ಲಾ “ಇಸ್ರೇಲಿನ ರಾಜರುಗಳ ಇತಿಹಾಸ” ಪುಸ್ತಕದಲ್ಲಿ ಬರೆದಿದ್ದಾರೆ. ರಾಜನು ತನ್ನ ಅರಮನೆಯನ್ನು ಮತ್ತಷ್ಟು ಸುಂದರವಾಗಿ ಕಾಣುವಂತೆ ಮಾಡಲು ಬಳಸಿದ ದಂತದ ಕುರಿತಾಗಿಯೂ ಆ ಪುಸ್ತಕವು ತಿಳಿಸುತ್ತದೆ. ರಾಜನು ನಿರ್ಮಿಸಿದ ನಗರಗಳ ಬಗ್ಗೆಯೂ ಆ ಪುಸ್ತಕವು ತಿಳಿಸುತ್ತದೆ.


ಏಹೂದನು ಅರಸನಾದ ಎಗ್ಲೋನನ ಹತ್ತಿರಕ್ಕೆ ಹೋದನು. ಎಗ್ಲೋನನು ತಂಪಾದ ಅರಮನೆಯ ಮಹಡಿಯ ಕೋಣೆಯಲ್ಲಿ ಒಬ್ಬಂಟಿಗನಾಗಿ ಕುಳಿತಿದ್ದನು. ಆಗ ಏಹೂದನು, “ದೇವರಿಂದ ನಾನು ನಿನಗೆ ಒಂದು ಸಂದೇಶವನ್ನು ತಂದಿದ್ದೇನೆ” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದುನಿಂತನು. ಅವನು ಏಹೂದನಿಗೆ ತುಂಬ ಹತ್ತಿರದಲ್ಲಿದ್ದನು.


ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.


ಸರ್ವಶಕ್ತನಾದ ಯೆಹೋವನ ನುಡಿಗಳಿವು. ನಾನು ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ, ಆದರೆ ಅವುಗಳೆಲ್ಲಾ ಬರಿದಾಗುವವು.


ಆದ್ದರಿಂದ ಯೆಹೋವನು ಹೇಳುವುದೇನೆಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಿಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.”


ನಿನ್ನ ಬಟ್ಟೆಗಳು ಪರಿಮಳದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು.


ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.”


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು