Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:2 - ಪರಿಶುದ್ದ ಬೈಬಲ್‌

2 “ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:2
37 ತಿಳಿವುಗಳ ಹೋಲಿಕೆ  

ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?


ಯೆಹೋವನು ನಿಮ್ಮ ಪೂರ್ವಿಕರನ್ನು ಎಷ್ಟು ಪ್ರೀತಿಮಾಡಿದ್ದನೆಂದರೆ, ಅವರ ಸಂತಾನದವರಾದ ನಿಮ್ಮನ್ನು ತನ್ನ ಜನರನ್ನಾಗಿ ಆರಿಸಿಕೊಳ್ಳುವಷ್ಟು ಪ್ರೀತಿಸಿದನು; ಬೇರೆ ಜನಾಂಗದವರ ಬದಲಾಗಿ ನಿಮ್ಮನ್ನೇ ಆರಿಸಿಕೊಂಡನು. ನೀವು ಇಂದಿಗೂ ಆತನಿಂದ ಆರಿಸಲ್ಪಟ್ಟ ಜನರಾಗಿದ್ದೀರಿ.


ಕೆಟ್ಟದ್ದನ್ನು ನಡೆಸುವ ಪ್ರತಿಯೊಬ್ಬ ವ್ಯಕ್ತಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಕಷ್ಟಸಂಕಟಗಳನ್ನು ಕೊಡುತ್ತಾನೆ.


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವಿಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”


ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.


ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು.


ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.


“ಕೇವಲ ದೈಹಿಕವಾಗಿ ಸುನ್ನತಿಯನ್ನು ಮಾಡಿಕೊಂಡ ಜನರನ್ನು ನಾನು ಶಿಕ್ಷಿಸುವ ಕಾಲ ಬರಲಿದೆ.


ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.


ಕೆಲವರು ನಿನ್ನನ್ನು ಅನುಸರಿಸುವದಿಲ್ಲ. ಅವರು ನಿನ್ನ ಹೆಸರಿನಿಂದ ಕರೆಯಲ್ಪಡುವದಿಲ್ಲ. ನಾವು ಅವರಂತೆ ಇದ್ದೆವು.


ಆತನು ಯಾಕೋಬಿಗೆ ತನ್ನ ಆಜ್ಞೆಗಳನ್ನು ಕೊಟ್ಟನು. ಇಸ್ರೇಲಿಗೆ ತನ್ನ ಕಟ್ಟಳೆಗಳನ್ನೂ ನಿಯಮಗಳನ್ನೂ ಕೊಟ್ಟನು.


ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು.


ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ಈ ವಂಶಗಳವರೇ.


ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.


ಇದಕ್ಕೆಲ್ಲಾ ಕಾರಣ ನಿನೆವೆ. ನಿನೆವೆಯು ಒಬ್ಬ ವೇಶ್ಯೆ. ಆಕೆಗೆ ತೃಪ್ತಿ ಇರದು. ಆಕೆಗೆ ಹೆಚ್ಚುಹೆಚ್ಚು ಬೇಕು. ಅನೇಕ ದೇಶಗಳಿಗೆ ತನ್ನನ್ನು ಮಾರಿಬಿಟ್ಟಿದ್ದಾಳೆ. ಮಂತ್ರತಂತ್ರಗಳನ್ನು ಉಪಯೋಗಿಸಿ ಜನರನ್ನು ತನ್ನ ಗುಲಾಮರನ್ನಾಗಿ ಮಾಡಿದ್ದಾಳೆ.


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ಯೆಹೋವನ ಪಾಲು ಆತನ ಜನರೇ. ಇಸ್ರೇಲನ ವಂಶಸ್ಥರು ದೇವಜನರಾಗಿದ್ದಾರೆ.


ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನು ದೇವರು ತಿಳಿದುಕೊಂಡಿದ್ದಾನೆ.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


“ಇಂಥಾ ಅದ್ಭುತಕಾರ್ಯಗಳು ಹಿಂದೆ ಎಂದಾದರೂ ನಡೆದಿವೆಯೋ? ದೇವರು ಭೂಮಿಯ ಮೇಲೆ ಮಾನವನನ್ನು ನಿರ್ಮಿಸಿದ ಕಾಲದಿಂದಿಡಿದು ಇಂದಿನವರೆಗೂ ಲೋಕದ ಎಲ್ಲಾ ಕಡೆಗಳಲ್ಲಿ ನಡೆದಿರುವ ಸಂಗತಿಗಳನ್ನು ವೀಕ್ಷಿಸಿ ನೋಡಿರಿ. ಇದರಷ್ಟು ಮಹತ್ತಾದ ಯಾವುದನ್ನಾದರೂ ಎಂದಾದರೂ ಕೇಳಿರುವುದುಂಟೇ?


ನಿಮ್ಮ ಎಲ್ಲಾ ಅಸಹ್ಯಕೃತ್ಯಗಳ ದೆಸೆಯಿಂದ ನಾನು ಹಿಂದೆಂದೂ ಮಾಡಿಲ್ಲದ, ಮುಂದೆಂದೂ ಮಾಡದ ಸಂಗತಿಗಳನ್ನು ನಿಮಗೆ ಬರಮಾಡುವೆನು.


ಎಫ್ರಾಯೀಮೇ, ನನಗೆ ಗೊತ್ತುಂಟು. ಇಸ್ರೇಲ್ ಮಾಡಿದ ವಿಷಯಗಳೆಲ್ಲವನ್ನು ನಾನು ಬಲ್ಲೆನು. ಎಫ್ರಾಯೀಮೇ, ನೀನು ಈಗಲೂ ಸೂಳೆಯಂತೆ ವರ್ತಿಸುತ್ತಿರುವೆ. ತನ್ನ ಪಾಪಗಳಿಂದ ಇಸ್ರೇಲ್ ಮಲಿನವಾಗಿದೆ.


ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.


ಇಬ್ಬರು ಒಟ್ಟಾಗಿ ನಡೆಯಬೇಕಾದರೆ ಅದಕ್ಕೆ ಅವರಿಬ್ಬರೂ ಒಪ್ಪಿಕೊಂಡಿರಲೇಬೇಕು.


ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.


ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಈ ಕುಟುಂಬದ ವಿರುದ್ಧವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವೆ.


ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು