Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:3 - ಪರಿಶುದ್ದ ಬೈಬಲ್‌

3 ಇಬ್ಬರು ಒಟ್ಟಾಗಿ ನಡೆಯಬೇಕಾದರೆ ಅದಕ್ಕೆ ಅವರಿಬ್ಬರೂ ಒಪ್ಪಿಕೊಂಡಿರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗೊತ್ತುಮಾಡಿಕೊಳ್ಳದೆ ಯಾರಾದರಿಬ್ಬರು ಜೊತೆಯಾಗಿ ನಡೆಯುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣಮಾಡುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಗೊತ್ತುಮಾಡಿಕೊಳ್ಳದೆ ಇಬ್ಬರು ಜೊತೆಯಾಗಿ ನಡೆಯುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಪ್ಪಂದ ಮಾಡಿಕೊಳ್ಳದ ಹೊರತು, ಇಬ್ಬರು ಜೊತೆಯಾಗಿ ನಡೆಯಲು ಸಾಧ್ಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:3
7 ತಿಳಿವುಗಳ ಹೋಲಿಕೆ  

ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.


ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.


“ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”


ಅಡವಿಯಲ್ಲಿರುವ ಸಿಂಹವು ಪ್ರಾಣಿಯನ್ನು ಹಿಡಿದ ನಂತರವೇ ಗರ್ಜಿಸುವದು. ಪ್ರಾಯದ ಸಿಂಹವು ತನ್ನ ಗವಿಯಲ್ಲಿ ಗರ್ಜಿಸಿದರೆ ಅದು ಒಂದು ಪ್ರಾಣಿಯನ್ನು ಹಿಡಿಯಿತು ಎಂದು ಅರ್ಥ.


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು