ಆಮೋಸ 3:6 - ಪರಿಶುದ್ದ ಬೈಬಲ್6 ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ? ಅಧ್ಯಾಯವನ್ನು ನೋಡಿ |
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.