ಆಮೋಸ 3:7 - ಪರಿಶುದ್ದ ಬೈಬಲ್7 ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.