ಆಮೋಸ 3:8 - ಪರಿಶುದ್ದ ಬೈಬಲ್8 ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು? ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.