Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 3:9 - ಪರಿಶುದ್ದ ಬೈಬಲ್‌

9-10 ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಷ್ಡೋದಿನ ಅರಮನೆಗಳಲ್ಲೂ ಈಜಿಪ್ಟಿನ ಸೌಧಗಳಲ್ಲೂ ಹೀಗೆಂದು ಪ್ರಕಟಿಸಿರಿ; “ಸಮಾರ್ಯದ ಬೆಟ್ಟಗುಡ್ಡಗಳಿಗೆ ಕೂಡಿಬನ್ನಿ. ಪಟ್ಟಣದಲ್ಲಿ ಎಷ್ಟೊಂದು ಗಲಭೆಗೊಂದಲ, ಎಷ್ಟೊಂದು ಹಿಂಸಾಚಾರ ನಡೆಯುತ್ತಿದೆ, ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಷ್ಡೋದಿನ ಅರಮನೆಗಳಲ್ಲಿಯೂ ಐಗುಪ್ತದೇಶದ ಸೌಧಗಳಲ್ಲಿಯೂ ಹೀಗೆ ಪ್ರಕಟಿಸಿರಿ - ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ, ಪಟ್ಟಣದೊಳಗೆ ಎಷ್ಟೆಷ್ಟೋ ಗದ್ದಲಗಳೂ ಹಿಂಸೆಗಳೂ ನಡೆಯುತ್ತವೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 3:9
22 ತಿಳಿವುಗಳ ಹೋಲಿಕೆ  

ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.


ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.


ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ ಅವರನ್ನು ನಾವು ಗುಲಾಮರನ್ನಾಗಿ ತೆಗೆದುಕೊಳ್ಳೋಣ. ಒಂದು ಜೊತೆ ಚಪ್ಪಲಿಯ ಕ್ರಯಕೊಟ್ಟು ಅವರನ್ನು ಖರೀದಿಸೋಣ. ಮತ್ತು ನೆಲದಲ್ಲಿ ಬಿದ್ದ ಗೋದಿಯನ್ನು ಒಟ್ಟುಗೂಡಿಸಿ ಮಾರೋಣ.”


“ಎಲ್ಲಾ ಜನಾಂಗಗಳಲ್ಲಿ ಪ್ರಚಾರಪಡಿಸಿರಿ, ಒಂದು ಧ್ವಜವನ್ನು ಹಾರಿಸಿ ಈ ಸಂದೇಶವನ್ನೆಲ್ಲಾ ಸಾರಿರಿ. ‘ಬಾಬಿಲೋನ್ ಜನಾಂಗವನ್ನು ವಶಪಡಿಸಿಕೊಳ್ಳಲಾಗುವುದು. ಬೇಲ್ ದೇವತೆ ನಾಚಿಕೆಪಡುವುದು. ಮೆರೋದಾಕ್ ದೇವತೆಯು ಭಯಪಡುವುದು. ಬಾಬಿಲೋನಿನ ವಿಗ್ರಹಗಳು ನಾಚಿಕೆಪಡುವವು. ಅಲ್ಲಿಯ ದೇವತೆಗಳು ಹೆದರಿಕೊಳ್ಳುವವು.’


ಇಸ್ರೇಲಿನ ರೈತರಾದ ನೀವು ಮತ್ತೆ ದ್ರಾಕ್ಷಿತೋಟಗಳನ್ನು ಬೆಳೆಸುವಿರಿ. ನೀವು ಸಮಾರ್ಯ ನಗರದ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಆ ದ್ರಾಕ್ಷಿತೋಟವನ್ನು ಬೆಳೆಸುವಿರಿ. ರೈತರಾದ ನೀವು ಅದರ ಫಲವನ್ನು ಅನುಭವಿಸುವಿರಿ.


ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಬೆನೆಜೆರಿನಿಂದ ಅಷ್ಡೋದಿಗೆ ತೆಗೆದುಕೊಂಡು ಹೋದರು.


ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನ್ನು ಒಂದು ಜನಾಂಗವನ್ನಾಗಿ ಮಾಡುವೆನು. ಅವರೆಲ್ಲರಿಗೂ ಒಬ್ಬನೇ ರಾಜನಿರುವನು. ಅವರು ಇನ್ನು ಮುಂದೆ ಎರಡು ರಾಜ್ಯಗಳಾಗುವದಿಲ್ಲ.


“ಆದರೆ ಇಸ್ರೇಲಿನ ಪರ್ವತಗಳೇ, ನೀವು ಹೊಸ ಮರಗಳನ್ನು ಬೆಳೆಯಿಸಿ ನನ್ನ ಜನರಾದ ಇಸ್ರೇಲರಿಗೆ ಹಣ್ಣುಗಳನ್ನು ಒದಗಿಸುತ್ತೀರಿ.


“ಈಜಿಪ್ಟಿನಲ್ಲಿ ಈ ಸಂದೇಶವನ್ನು ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನ್ನು ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’


ಗತ್‌ನಲ್ಲಿ ಈ ಸುದ್ದಿಯನ್ನು ಹೇಳದಿರು. ಅಷ್ಕೆಲೋನಿನ ಬೀದಿಗಳಲ್ಲಿ ಇದನ್ನು ಸಾರದಿರು. ಫಿಲಿಷ್ಟಿಯರ ಪಟ್ಟಣಗಳೆಲ್ಲಾ ಸಂತೋಷಪಡುವವು. ಆ ವಿದೇಶಿಯರ ಹೆಣ್ಣುಮಕ್ಕಳು ಉಲ್ಲಾಸಪಡುವರು.


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ಬೆಲೆಬಾಳುವ ಎಲ್ಲಾ ಬಗೆಯ ವಸ್ತುಗಳನ್ನು ಕದ್ದು ನಮ್ಮ ಮನೆಗಳಲ್ಲಿ ತುಂಬಿಸಿಕೊಳ್ಳೋಣ.


ದಯೆಯುಳ್ಳ ಸ್ತ್ರೀಯು ಗೌರವವನ್ನು ಪಡೆಯುವಳು. ಬಲಾತ್ಕಾರಿಗಳಾದ ಗಂಡಸರು ಕೇವಲ ಹಣವನ್ನು ಗಳಿಸುವರು.


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


“ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.


ಶಿಕ್ಷಿಸಲ್ಪಡುವ ದಿವಸದ ಕಡೆಗೆ ನೀವು ಧಾವಿಸುತ್ತಿದ್ದೀರಿ. ಅಕ್ರಮ ಆಳ್ವಿಕೆಯನ್ನು ನೀವು ಹತ್ತಿರಕ್ಕೆ ಬರಮಾಡಿಕೊಳ್ಳುತ್ತಾ ಇದ್ದೀರಿ.


ಕದ್ದುಕೊಂಡ ಭಂಡಾರಗಳನ್ನು ದುಷ್ಟರು ಇನ್ನೂ ಗುಪ್ತವಾಗಿಡುವರೋ? ಕೆಟ್ಟ ಜನರು ತಮ್ಮ ಚಿಕ್ಕ ಅಳತೆಯಿಂದ ಜನರನ್ನು ಇನ್ನೂ ಮೋಸಪಡಿಸುವರೋ? ಹೌದು, ಅವೆಲ್ಲವೂ ನಡಿಯುತ್ತಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು