ಆಮೋಸ 4:5 - ಪರಿಶುದ್ದ ಬೈಬಲ್5 ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮಮಾಡಿರಿ, [ಕೊಟ್ಟ] ಕಾಣಿಕೆಗಳನ್ನು ಪ್ರಕಟಿಸಿರಿ, ಸಾರಿಕೊಳ್ಳಿರಿ; ಇಸ್ರಾಯೇಲ್ಯರೇ, ಹೀಗೆ ಮಾಡುವದು ನಿಮಗಿಷ್ಟವಷ್ಟೆ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಹುಳಿಹಿಟ್ಟಿನ ರೊಟ್ಟಿಯನ್ನು ಹೋಮ ಮಾಡಿ, ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ. ಕಾಣಿಕೆ ಕೊಟ್ಟದ್ದನ್ನು ಹೇಳಿಕೊಳ್ಳಿರಿ. ಇಸ್ರಾಯೇಲರೇ, ಹೀಗೆ ಮಾಡುವುದು ಇಷ್ಟವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.