Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:7 - ಪರಿಶುದ್ದ ಬೈಬಲ್‌

7 “ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗರೆಯುವುದನ್ನು ನಿಲ್ಲಿಸಿದೆನು. ಆದ್ದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ ನಿಮಗೆ ಮಳೆಯನ್ನು ತಡೆದೆನು; ಒಂದು ಊರಿನ ಮೇಲೆ ಮಳೆಯಾಗುವಂತೆಯೂ ಇನ್ನೊಂದು ಊರಿನ ಮೇಲೆ ಮಳೆಯಾಗದಂತೆಯೂ ಮಾಡಿದೆನು; ಒಬ್ಬನ ಹೊಲದಲ್ಲಿ ಮಳೆಯಾಯಿತು, ಮಳೆಯಾಗದ ಹೊಲವು ಬಾಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:7
27 ತಿಳಿವುಗಳ ಹೋಲಿಕೆ  

ನೀನು ಪಾಪ ಮಾಡಿದ್ದರಿಂದ ಮಳೆ ಬರಲಿಲ್ಲ; ಹಿಂಗಾರು ಮಳೆಯೂ ಆಗಲಿಲ್ಲ. ನಿನ್ನ ಮುಖದ ಮೇಲೆ ಇನ್ನೂ ವೇಶ್ಯೆಯ ಕಳೆಯೇ ಇದೆ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ನಾಚಿಕೆಯೂ ಆಗುವುದಿಲ್ಲ.


ಇಸ್ರೇಲರು ವಾಸವಾಗಿದ್ದ ಗೋಷೆನ್ ಪ್ರದೇಶದಲ್ಲಿ ಮಾತ್ರ ಆಲಿಕಲ್ಲಿನ ಮಳೆಯಾಗಲಿಲ್ಲ.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ಎಲೀಯನು ಸಹ ನಮ್ಮಂತೆಯೇ ಒಬ್ಬ ಮನುಷ್ಯನಾಗಿದ್ದನು. ಮಳೆ ಬಾರದಂತೆ ಅವನು ಪ್ರಾರ್ಥಿಸಿದಾಗ ಮೂರುವರೆ ವರ್ಷಗಳವರೆಗೆ ಆ ನಾಡಿನಲ್ಲಿ ಮಳೆಯೇ ಬೀಳಲಿಲ್ಲ!


ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.


ಈ ಮೂರು ದಿನಗಳಲ್ಲಿ ಯಾರೂ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾವ ಸ್ಥಳಕ್ಕೂ ಹೋಗಲಿಲ್ಲ. ಆದರೆ ಇಸ್ರೇಲರು ವಾಸಿಸುತ್ತಿದ್ದ ಸ್ಥಳಗಳಲ್ಲಿ ಬೆಳಕಿತ್ತು.


ಆದರೆ ಇಸ್ರೇಲರ ಪಶುಗಳಿಗೂ ಈಜಿಪ್ಟಿನವರ ಪಶುಗಳಿಗೂ ವ್ಯತ್ಯಾಸ ಮಾಡುವೆನು. ಇಸ್ರೇಲರ ಯಾವ ಪಶುವೂ ಸಾಯುವುದಿಲ್ಲ.


ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.


‘ಸುಗ್ಗಿಗೆ ಇನ್ನೂ ನಾಲ್ಕು ತಿಂಗಳು ಕಾಯಬೇಕು’ ಎಂದು ನೀವು ಹೇಳುವಿರಿ. ಆದರೆ ನಾನು ನಿಮಗೆ ಹೇಳುತ್ತೇನೆ, ನಿಮ್ಮ ಕಣ್ಣುಗಳನ್ನು ತೆರೆಯಿರಿ. ಹೊಲಗಳ ಸುತ್ತಲೆಲ್ಲಾ ನೋಡಿರಿ, ಅವು ಕೊಯ್ಲಿಗೆ ಬಂದಿವೆ.


ರಾಜನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಭೂಲೋಕದ ಕುಟುಂಬಗಳ ಯಾವ ಜನರಾದರೂ ಜೆರುಸಲೇಮಿಗೆ ಹೋಗದಿದ್ದಲ್ಲಿ ಅವರ ರಾಜ್ಯಗಳಲ್ಲಿ ಮಳೆಗೆರೆಯುವದು ನಿಂತುಹೋಗುವದು.


ಅನ್ಯರ ವಿಗ್ರಹಗಳಿಗೆ ಮಳೆ ಸುರಿಸುವ ಸಾಮರ್ಥ್ಯವಿಲ್ಲ. ಆಕಾಶಕ್ಕೆ ಮಳೆಯನ್ನು ಸುರಿಸುವ ಸಾಮರ್ಥ್ಯವಿಲ್ಲ. ನೀನೊಬ್ಬನೇ ನಮ್ಮ ಆಶಾಕೇಂದ್ರ. ನೀನೇ ಈ ಎಲ್ಲವುಗಳನ್ನು ಸೃಷ್ಟಿಸಿದವನು.


ಭೂಮಿಗೆ ಮಳೆ ಬೀಳುವದಿಲ್ಲ. ಯಾರೂ ಬಿತ್ತನೆಗಾಗಿ ಭೂಮಿಯನ್ನು ಉಳುವದಿಲ್ಲ. ರೈತರು ಎದೆಗುಂದುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.


ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ.


ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ.


ನಿಮ್ಮನ್ನು ಇತರ ಜನರಿಗಿಂತಲೂ ಉತ್ತಮರೆಂದು ಯಾರು ಹೇಳುತ್ತಾರೆ? ನಿಮ್ಮಲ್ಲಿರುವ ಪ್ರತಿಯೊಂದನ್ನೂ ದೇವರೇ ನಿಮಗೆ ಕೊಟ್ಟಿದ್ದಾನೆ. ಹೀಗಿರುವಾಗ, ನಿಮ್ಮ ಸ್ವಂತ ಶಕ್ತಿಯಿಂದ ಅವುಗಳನ್ನು ಪಡೆದುಕೊಂಡವರಂತೆ ಏಕೆ ಜಂಬಕೊಚ್ಚಿಕೊಳ್ಳುವಿರಿ?


ಮೋಶೆ ತನ್ನ ಕೈಯನ್ನು ಆಕಾಶದ ಕಡೆಗೆ ಚಾಚಿದಾಗ ಕಾರ್ಗತ್ತಲು ಈಜಿಪ್ಟನ್ನು ಆವರಿಸಿತು. ಕಾರ್ಗತ್ತಲು ಈಜಿಪ್ಟಿನಲ್ಲಿ ಮೂರು ದಿನಗಳವರೆಗೆ ಇತ್ತು.


ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು