Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 4:8 - ಪರಿಶುದ್ದ ಬೈಬಲ್‌

8 ಹೀಗೆ ಎರಡು ಮೂರು ಪಟ್ಟಣಗಳ ನಿವಾಸಿಗಳು ನೀರಿಗಾಗಿ ಇನ್ನೊಂದು ಪಟ್ಟಣಕ್ಕೆ ಕಷ್ಟಪಟ್ಟು ಕೊಂಡುಹೋದರು. ಆದರೆ ಅಲ್ಲಿ ಎಲ್ಲರಿಗೂ ನೀರು ದೊರಕಲಿಲ್ಲ. ಹೀಗಾದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇವು ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಲವಾರು ಊರಿನವರು ಕುಡಿಯುವ ನೀರಿಗಾಗಿ ಪರದಾಡುತ್ತಾ ಪಕ್ಕದ ಪಟ್ಟಣಕ್ಕೆ ಹೋದರೂ ಅವರ ದಾಹವು ಇಂಗಲಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎರಡು ಮೂರು ಊರಿನವರು ನೀರು ಕುಡಿಯುವದಕ್ಕೆ ಮತ್ತೊಂದು ಊರಿಗೆ ಬಳಲುತ್ತಾ ಹೋಗುತ್ತಿದ್ದರು; ಬಾಯಾರಿಕೆ ತೀರಲಿಲ್ಲ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎರಡು ಅಥವಾ ಮೂರು ಪಟ್ಟಣದವರು ಕುಡಿಯುವ ನೀರಿಗಾಗಿ ಒಂದು ಪಟ್ಟಣದಿಂದ ಇನ್ನೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ, ಅವರ ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 4:8
16 ತಿಳಿವುಗಳ ಹೋಲಿಕೆ  

“ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.


ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”


ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು.


ನೀವು ತಿನ್ನುವಿರಿ ಆದರೆ ನಿಮ್ಮ ಹೊಟ್ಟೆ ತುಂಬದು. ನೀವು ಹೊಟ್ಟೆಗಿಲ್ಲದವರಂತೆ ಹಸಿವಿನಿಂದಲೇ ಇರುವಿರಿ. ನೀವು ಜನರನ್ನು ಸುರಕ್ಷಿತ ಸ್ಥಳಕ್ಕೆ ತರಲು ಪ್ರಯತ್ನಿಸುವಿರಿ. ಆದರೆ ನೀವು ರಕ್ಷಿಸಿದ ಜನರನ್ನು ಖಡ್ಗಧಾರಿಗಳು ಕೊಂದುಬಿಡುವರು. ಜನರು ನಿಮ್ಮನ್ನು ಹಿಡಿಯುವರು.


ಎಫ್ರಾಯೀಮನ ಹೆಮ್ಮೆಯು ಅವನಿಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತದೆ. ಜನರಿಗೆ ನಾನಾ ತರದ ಸಂಕಟಗಳು ಬಂದಾಗ್ಯೂ ಅವರು ತಮ್ಮ ದೇವರಾದ ಯೆಹೋವನ ಬಳಿಗೆ ಹೋಗಲಿಲ್ಲ. ಜನರು ತಮ್ಮ ಸಹಾಯಕ್ಕಾಗಿ ಆತನಿಗೆ ಮೊರೆಯಿಡಲಿಲ್ಲ.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


‘ಈ ದುಷ್ಕೃತ್ಯಗಳನ್ನೆಲ್ಲಾ ಮಾಡಿ ಮುಗಿಸಿದ ಮೇಲೆಯೂ ಇಸ್ರೇಲ್ ನನ್ನಲ್ಲಿಗೆ ಬರಬಹುದು’ ಎಂದು ನಾನು ಭಾವಿಸಿದ್ದೆ. ಆದರೆ ಅವಳು ನನ್ನಲ್ಲಿಗೆ ಬರಲಿಲ್ಲ. ಇಸ್ರೇಲಿನ ವಂಚಕಿ ಸಹೋದರಿಯಾದ ಯೆಹೂದ ಎಂಬಾಕೆಯು ಮಾಡಿದ್ದನ್ನು ನೋಡಿದಳು.


ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.


ನೀನು ಪಾಪ ಮಾಡಿದ್ದರಿಂದ ಮಳೆ ಬರಲಿಲ್ಲ; ಹಿಂಗಾರು ಮಳೆಯೂ ಆಗಲಿಲ್ಲ. ನಿನ್ನ ಮುಖದ ಮೇಲೆ ಇನ್ನೂ ವೇಶ್ಯೆಯ ಕಳೆಯೇ ಇದೆ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ನಾಚಿಕೆಯೂ ಆಗುವುದಿಲ್ಲ.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


“ದೇವರ ಕಡೆಗೆ ಹಿಂದಿರುಗಲು ಇಸ್ರೇಲರಿಗೆ ಮನಸ್ಸಿಲ್ಲ. ಆದ್ದರಿಂದ ಅವರು ಈಜಿಪ್ಟಿಗೆ ಹೋಗುವರು. ಅಶ್ಶೂರದ ಅರಸನು ಅವರಿಗೆ ಅರಸನಾಗುವನು.


ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು