ಆಮೋಸ 5:10 - ಪರಿಶುದ್ದ ಬೈಬಲ್10 ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥರನ್ನು ದ್ವೇಷಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥವಾದಿಯನ್ನು ದ್ವೇಷಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ. ಅಧ್ಯಾಯವನ್ನು ನೋಡಿ |
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು: